ಚುನಾವಣಾ ಬಾಂಡ್ ರದ್ದು; ಮೋದಿ ಭ್ರಷ್ಟ ನೀತಿಗಳಿಗೆ ಮತ್ತೊಂದು ಉದಾಹರಣೆ ಎಂದ ರಾಹುಲ್ ಗಾಂಧಿ

Public TV
2 Min Read
Modi Rahul Gandhi SC

ನವದೆಹಲಿ: ಚುನಾವಣಾ ಬಾಂಡ್‌ಗಳ (Electoral Bonds Scheme) ಯೋಜನೆ ಅಸಾಂವಿಧಾನಿಕ ಎಂಬ ಸುಪ್ರೀಂ ಕೋರ್ಟ್ (Supreme Court) ತೀರ್ಪಿಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಖುಷಿ ವ್ಯಕ್ತಪಡಿಸಿವೆ.

ಮೋದಿ ಭ್ರಷ್ಟ ನೀತಿಗಳಿಗೆ ಮತ್ತೊಂದು ಉದಾಹರಣೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವ್ಯಾಖ್ಯಾನಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿಯವರ ಭ್ರಷ್ಟ ನೀತಿಗಳಿಗೆ ಇನ್ನೊಂದು ಸಾಕ್ಷಿ ನಿಮ್ಮ ಮುಂದಿದೆ. ಬಿಜೆಪಿ ಚುನಾವಣಾ ಬಾಂಡ್‌ಗಳನ್ನು ಲಂಚ ಮತ್ತು ಕಮಿಷನ್ ಪಡೆಯುವ ಮಾಧ್ಯಮವನ್ನಾಗಿ ಮಾಡಿಕೊಂಡಿತ್ತು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ: ಸುಪ್ರೀಂ ಕೋರ್ಟ್‌

ಇದು ಚುನಾವಣೆಯಲ್ಲಿ ಭಾರೀ ಪರಿಣಾಮ ಬೀರಲಿದೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ. ಸಿಪಿಐಎಂ ಪಕ್ಷ ಇದರ ಕ್ರೆಡಿಟ್ ತೆಗೆದುಕೊಳ್ಳಲು ನೋಡಿದೆ. ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು ನಮ್ಮ ಪಕ್ಷ ಮಾತ್ರ.. ಅಲ್ಲದೇ, ನಾವು ಎಲೆಕ್ಷನ್ ಬಾಂಡ್ ಸ್ವೀಕರಿಸಿರಲಿಲ್ಲ ಎಂದಿದೆ.

ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಅರ್ಜಿದಾರ ಪ್ರಶಾಂತ್ ಭೂಷಣ್ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮಾತ್ರ, ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಗೌರವಿಸುತ್ತೇವೆ. ಆದ್ರೆ, ಚುನಾವಣಾ ಬಾಂಡ್‌ಗಳ ಯೋಜನೆ ವಿಚಾರದಲ್ಲಿ ವಿಪಕ್ಷಗಳು ಸುಮ್ನೆ ರಾಜಕೀಯ ಮಾಡ್ತಿವೆ ಎಂದು ಆಪಾದಿಸಿದೆ. ಪ್ರಧಾನಿ ಮೋದಿಗೆ ಪರ್ಯಾಯವೇ ಇಲ್ಲ ಎನ್ನುವ ಮೂಲಕ ಮತ್ತೊಮ್ಮೆ ಮೋದಿ ಸರ್ಕಾರವೇ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಾರಣ ಬಹಿರಂಗಪಡಿಸಿದ ಸೋನಿಯಾ ಗಾಂಧಿ

ಚುನಾವಣಾ ಬಾಂಡ್‌ಗಳ ಕಾನೂನಿನ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಹಾಗೂ ಅರ್ಜಿದಾರರ ನಡುವಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠವು ಕಳೆದ ನವೆಂಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

Share This Article