ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಮಹತ್ವ ಆದೇಶ ಹೊರಡಿಸಿದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ.
ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಯೋಜಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮುಮ ರಾವಿಗೆ ಸಂಪರ್ಕ ಕಲ್ಪಿಸಲಿವೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
Advertisement
Booking for reservation in these trains will start at 4 pm on 11 May and will be available only on the IRCTC website: Ministry of Railways
— ANI (@ANI) May 10, 2020
Advertisement
ವಿಶೇಷ ರೈಲುಗಳ ಟಿಕೆಟ್ ಬುಕಿಂಗ್ ಮೇ 11ರಂದು ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಐಆರ್‌ಸಿಟಿಸಿ ವೆಬ್‍ಸೈಟ್‍ನಲ್ಲಿ ಮಾತ್ರ ಟಿಕೆಟ್ ಲಭ್ಯವಿರುತ್ತದೆ. ರೈಲ್ವೆ ನಿಲ್ದಾಣಗಳ ಕೌಂಟರ್ ಗಳಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
Advertisement
ಪ್ರಯಾಣಿಕರು ಮಾಸ್ಕ್ ಹಾಕಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ. ಕೊರೊನಾ ಸೋಂಕಿನ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲು ಹತ್ತಲು ಅವಕಾಶವಿರುತ್ತದೆ. ರೈಲು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದೆ.
Advertisement
These trains will be run as special trains from New Delhi Station connecting Dibrugarh, Agartala, Howrah, Patna, Bilaspur, Ranchi, Bhubaneswar, Secunderabad, Bengaluru, Chennai, Thiruvananthapuram, Madgaon, Mumbai Central, Ahmedabad and Jammu Tawi: Ministry of Railways
— ANI (@ANI) May 10, 2020