ಕಲಬುರಗಿ: ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಕಲಬುರಗಿ (Kalaburagi) ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಹಾಗೂ ಖರ್ಗೆಯವರ (Mallikarjun Kharge) ಅಳಿಯ ರಾಧಾಕೃಷ್ಣ ದೊಡ್ಡಮನಿಯವರು (Radhakrishna Doddamani) 27,205 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Advertisement
ರಾಧಾಕೃಷ್ಣ ದೊಡ್ಡಮನಿಯವರು 6,52,321 ಮತ ಪಡೆದರೆ ಅವರ ವಿರುದ್ಧ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ 6,25,116 ಮತಗಳಿಸಿ ಸೋಲಿಗೆ ಶರಣಾದರು.
Advertisement
Advertisement
ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುದ್ಧ ಅವರು ಗೆಲುವು ಸಾಧಿಸುವ ಮೂಲಕ ಮಾವನ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಕಳೆದ ಬಾರಿ ಜಾಧವ್ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆಯವರು ಸೋತಿದ್ದರು. ಇದೇ ಕಾರಣಕ್ಕೆ ಸೋಲಿನ ಸೇಡು ತೀರಿಸಿಕೊಳ್ಳಲು ರಾಧಾಕೃಷ್ಣ ದೊಡ್ಡಮನಿಯವರು ಸವಾಲು ಹಾಕಿದ್ದರು. ಇದೀಗ ಕಲ್ಯಾಣ ಕರ್ನಾಟಕ ಭಾಗದ ಮತದಾರು ಮಲ್ಲಿಕಾರ್ಜುನ್ ಖರ್ಗೆಯವರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.
Advertisement
ಕಲ್ಯಾಣ ಕರ್ನಾಟಕದ 5 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಲೋಕಸಭೆಯಲ್ಲಿ ಕಾಂಗ್ರೆಸ್‍ಗೆ ಜಯ ಸಿಕ್ಕಿದೆ. ಈ ಹಿಂದೆ 5 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಈ ಬಾರಿ ಎಐಸಿಸಿ ಅಧ್ಯಕ್ಷ ಖರ್ಗೆ ಆದ ಬಳಿಕ ಕಾಂಗ್ರೆಸ್‍ಗೆ ಮತದಾರ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಮತ ಹಾಕಿದ್ದಾನೆ.