Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್- ಎಲ್ಲರೂ ತಪ್ಪದೇ ಲಸಿಕೆ ಪಡೆಯಿರಿ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್- ಎಲ್ಲರೂ ತಪ್ಪದೇ ಲಸಿಕೆ ಪಡೆಯಿರಿ: ಸುಧಾಕರ್

Bengaluru City

18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್- ಎಲ್ಲರೂ ತಪ್ಪದೇ ಲಸಿಕೆ ಪಡೆಯಿರಿ: ಸುಧಾಕರ್

Public TV
Last updated: April 9, 2022 12:57 pm
Public TV
Share
2 Min Read
DR K SUDHAKAR
SHARE

ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿಸಿದೆ. ಇದು ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರು ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು. 18 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣವಾಗಿದ್ದಲ್ಲಿ, ಈ ಡೋಸ್ ಪಡೆಯಬಹುದು ಎಂದು ಸುಧಾಕರ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೋಗ ಪೂರ್ವ ನಿಯಂತ್ರಣ ಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ. ಇದೇ ರೀತಿ ಕೋವಿಡ್ ಲಸಿಕಾಕರಣಕ್ಕೂ ವೇಗ ನೀಡಿದ್ದು, ದೇಶದಲ್ಲಿ ಈವರೆಗೆ 185 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ಲಸಿಕಾಕರಣವನ್ನು ಚುರುಕುಗೊಳಿಸಿರುವುದರಿಂದ, ಈವರೆಗೆ 10.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

BOOSTER DOSE

ರಾಜ್ಯದಲ್ಲಿ ಈವರೆಗೆ 12-14 ವಯೋಮಾನದವರಿಗೆ 13,27,985 ಮೊದಲ ಡೋಸ್ (ಶೇ.65.6), 15-17 ವಯೋಮಾನದವರಿಗೆ 25,09,276 ಮೊದಲ ಡೋಸ್ (ಶೇ.79) ಹಾಗೂ 20,48,576 ಎರಡನೇ ಡೋಸ್ (ಶೇ.64.5) ನೀಡಲಾಗಿದೆ. ಈವರೆಗೆ 15 ವರ್ಷ ಮೇಲ್ಪಟ್ಟವರಿಗೆ 5,23,05,424 ಮೊದಲ ಡೋಸ್ (ಶೇ.100.4) ಹಾಗೂ 4,97,08,909 ಎರಡನೇ ಡೋಸ್ (95.4%) ನೀಡಲಾಗಿದೆ. 18+ ವಯೋಮಾನದವರಿಗೆ 4,97,96,148 ಮೊದಲ ಡೋಸ್ (ಶೇ.101.8) ಹಾಗೂ 4,76,60,333 ಎರಡನೇ ಡೋಸ್ (ಶೇ.97.4) ನೀಡಲಾಗಿದೆ. ಈವರೆಗೆ 14,24,433 (ಶೇ.57.6) ಮುನ್ನೆಚ್ಚರಿಕೆ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ರಾಜ್ಯ ಲಸಿಕಾಕರಣದಲ್ಲಿ ಶ್ಲಾಘನೀಯ ಪ್ರಗತಿ ಸಾಧಿಸುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಎಂಎಫ್ ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಕನ್ನಡವೇ ಮಾಯ

ಕೇಂದ್ರ ಸರ್ಕಾರ ಮಾಡಿಕೊಟ್ಟ ಈ ಅವಕಾಶವನ್ನು ಎಲ್ಲರೂ ತಪ್ಪದೇ ಬಳಸಿಕೊಂಡು ಮುನ್ನೆಚ್ಚರಿಕೆ ಲಸಿಕೆ ಪಡೆಯಬೇಕು. ಎರಡು ಡೋಸ್‌ಗಳಂತೆ ಮುನ್ನೆಚ್ಚರಿಕೆ ಡೋಸ್ ಕೂಡ ಅಗತ್ಯ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ಜೊತೆಗೆ ಕೋವಿಡ್ ಸುರಕ್ಷತಾ ಕ್ರಮಗಳನ್ನೂ ಪಾಲಿಸಬೇಕು ಎಂದು ಆರೋಗ್ಯ ಸಚಿವ ಕೋರಿದ್ದಾರೆ.

TAGGED:booster doseCovid 19K Sudhakarಕೋವಿಡ್ಬೂಸ್ಟರ್ ಡೋಸ್ಮುನ್ನೆಚ್ಚರಿಕೆ ಲಸಿಕೆಸುಧಾಕರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
4 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
4 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
4 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
5 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
6 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?