ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಗಡಿ ವಿವಾದದ (Border Dispute) ಪ್ರಕರಣ ವಿಚಾರಣೆಗೆ ಬರಲಿದ್ದು, ಕರ್ನಾಟಕದ (Karnataka) ನಿಲುವು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಗುರುವಾರ ಅವರು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ನಿಲುವು ಸಂವಿಧಾನಬದ್ಧ ಎಂದು ಹೇಳಿದರು.
Advertisement
Advertisement
ಮಹಾರಾಷ್ಟ್ರದ (Maharashtra) ಅರ್ಜಿ ಮೈಂಟೆನೆಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ಧ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಬೆಂಗಳೂರಿಗೆ ಎಂಟ್ರಿ ಕೊಟ್ಟಿವೆ 4 ಚಿರತೆಗಳು? – ಕೋಡಿಪಾಳ್ಯ ಬಳಿಯ 5 ಶಾಲೆಗಳಿಗೆ ಆತಂಕ
Advertisement
ಪ್ರತ್ಯೇಕ ಕಾಲೇಜು ಚರ್ಚೆಯಾಗಿಲ್ಲ:
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಬ್ ಧರಿಸಲು ಅನುಮತಿ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬೊಮ್ಮಾಯಿ, ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದು ತಿಳಿಸಿದರು.
Advertisement
ಈ ಸಂದರ್ಭ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರ