ಆಸೀಸ್‌ ವಿರುದ್ಧ ಹೀನಾಯ ಸೋಲು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದ ಭಾರತ, ಫೈನಲ್‌ ಹಾದಿ ಕಠಿಣ

Public TV
2 Min Read
Australia 2

ಅಡಿಲೇಡ್: ಬಾರ್ಡರ್‌ ಗವಾಸ್ಕರ್‌ ಟ್ರೋಫಿ (Border Gavaskar Trophy) ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಕಂಡಿದ್ದ ಟೀಂ ಇಂಡಿಯಾ, ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ಹೀನಾಯ ಸೋಲು ಕಂಡಿದೆ.

ಈ ಹೀನಾಯ ಸೋಲಿನೊಂದಿಗೆ ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ (WTC) ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಇದರಿಂದ WTC ಫೈನಲ್‌ ಪ್ರವೇಶಿಸುವುದು ಭಾರತ ತಂಡಕ್ಕೆ ಸವಾಲಾಗಿದೆ. ಇನ್ನೂ ಪಿಂಕ್ ಬಾಲ್ ಟೆಸ್ಟ್ (Pink Ball Test) ಪಂದ್ಯದಲ್ಲಿ ಮತ್ತೊಮ್ಮೆ ಪ್ರಾಬಲ್ಯ ಮೆರೆದಿರುವ ಆಸ್ಟ್ರೇಲಿಯಾ ಐತಿಹಾಸಿಕ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ದಕ್ಷಿಣ ಆಫ್ರಿಕಾ 2ನೇ ಸ್ಥಾನ ಪಡೆದುಕೊಂಡಿದೆ.

WTC Table

ಅಡಿಲೇಡ್‌ನ ಮೈದಾನದಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ, ಭಾರತದ ವಿರುದ್ಧ 10 ವಿಕೆಟ್‌ಗಳ ಗೆಲುವು ಕಂಡಿದೆ. ಕೇವಲ 19 ರನ್‌ ಗುರಿ ಪಡೆದ ಆಸೀಸ್‌ 3.2 ಓವರ್‌ಗಳಲ್ಲೇ ಟಾರ್ಗೆಟ್‌ ಪೂರೈಸಿತು.

ದ್ವಿತೀಯ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್ ಗಳಿಸಿತ್ತು. ತನ್ನ ಸರದಿಯ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 337 ರನ್‌ಗಳಿಸುವುದರೊಂದಿಗೆ 157 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. ಆದ್ರೆ 2ನೇ ಇನ್ನಿಂಗ್ಸ್‌ನಲ್ಲಿ ಭಾರತ (Team India) 175 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಕೇವಲ 19 ರನ್‌ಗಳ ಗುರಿ ನೀಡಿತು.

Rishabh Pant

ಅಂತಿಮವಾಗಿ ಆಸ್ಟ್ರೇಲಿಯಾ 3.2 ಓವರ್‌ಗಳಲ್ಲಿ ಗುರಿ ಬೆನ್ನತ್ತಿ ಸುಲಭ ಜಯ ದಾಖಲಿಸಿತು. ಇದರೊಂದಿಗೆ ಸರಣಿಯು 1-1 ಸಮವಾಗಿದೆ. ಈ ಮೂಲಕ WTC ಅಂಕಪಟ್ಟಿಯಲ್ಲಿ ಆಸೀಸ್‌ ಮೊದಲ ಸ್ಥಾನಕ್ಕೇರಿದೆ.

ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸೋತ ಸಂತರ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ 2ನೇ ಟೆಸ್ಟ್‌ ಗೆಲುವಿನೊಂದಿಗೆ ಶೇ.60.71 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಭಾರತ ಶೇ.57.29 ಅಂಕಗಳೊಂದಿಗೆ 3ನೇ ಸ್ಥಾನ ಕಾಯ್ದುಕೊಂಡರೆ, ದಕ್ಷಿಣ ಆಫ್ರಿಕಾ ತಂಡ ಶೇ.59.26 ಅಂಕಗಳೊಂದಿಗೆ 2ನೇ ಸ್ಥಾನ ಪಡೆದುಕೊಂಡಿದೆ.

Ind vs Aus 3

ಮುಂದಿನ ವರ್ಷ ಜೂನ್ 11ರಿಂದ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮೈದಾದಲ್ಲಿ 2023-25ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಭಾರತ ಫೈನಲ್‌ ಪಂದ್ಯ ತಲುಪಬೇಕಿದ್ದರೆ ಆಸೀಸ್‌ ತಂಡವನ್ನು 4-1 ಅಂತರದಲ್ಲಿ ಸೋಲಿಸಬೇಕು. ಆದ್ರೆ ಈಗಾಗಲೇ ಒಂದು ಪಂದ್ಯ ಸೋತಿರುವುದರಿಂದ ಉಳಿದ ಮೂರು ಟೆಸ್ಟ್‌ ಪಂದ್ಯಗಳನ್ನು ಭಾರತ ಗೆಲ್ಲಲೇಬೇಕಿದೆ.

ಸಂಕ್ಷಿಪ್ತ ಸ್ಕೋರ್‌
ಭಾರತ ಮೊದಲ ಇನ್ನಿಂಗ್ಸ್‌ – 180/10
ಆಸೀಸ್‌ ಮೊದಲ ಇನ್ನಿಂಗ್ಸ್‌ – 337/10
ಭಾರತ 2ನೇ ಇನ್ನಿಂಗ್ಸ್‌ – 171/10
ಆಸೀಸ್‌ 2ನೇ ಇನ್ನಿಂಗ್ಸ್‌ – 19/0

Share This Article