ಕೊನೆಯ ಪಂದ್ಯ ಡ್ರಾ – ಆಸೀಸ್ ವಿರುದ್ಧ ಸರಣಿ ಗೆದ್ದ ಭಾರತ

Public TV
2 Min Read
Team India 5

ಅಹಮದಾಬಾದ್: ಟೀಂ ಇಂಡಿಯಾ (Team India) ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯಲ್ಲಿ 2-1 ಅಂತರದಲ್ಲಿ ಜಯ ದಾಖಲಿಸುವ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಟೂರ್ನಿಯ 2ನೇ ಆವೃತ್ತಿಯ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

ಸತತ 2ನೇ ಬಾರಿ ಫೈನಲ್ ತಲುಪಿದ ಸಾಧನೆ ಮಾಡಿರುವ ಭಾರತ, ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದು, ಜೂನ್ 7 ರಂದು ಲಂಡನ್ನಿನ ದಿ ಓವೆಲ್ ಕ್ರೀಡಾಂಗಣದಲ್ಲಿ ಆಸೀಸ್ ವಿರುದ್ಧ ಸೆಣಸಲಿದೆ. ಇದನ್ನೂ ಓದಿ: 1,205 ದಿನಗಳ ಬಳಿಕ ಶತಕ ಸಿಡಿಸಿ ಮೆರೆದಾಡಿದ ಕೊಹ್ಲಿ

Team India 1 1

ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 571 ರನ್ ಗಳಿಸಿದ್ದ ಟೀಂ ಇಂಡಿಯಾ 91 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. ಬಳಿಕ ತನ್ನ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 4ನೇ ದಿನದಾಟದ ಅಂತ್ಯಕ್ಕೆ 6 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ ಕೇವಲ 3 ರನ್ ಗಳಿಸಿತ್ತು. ಕೊನೆಯದಿನ ತನ್ನ ಸರದಿ ಆರಂಭಿಸಿ 78.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 175 ರನ್‌ಗಳಿಸಿತು. ಸಂಜೆ ಆದ ಹಿನ್ನೆಯಲ್ಲಿ ಎರಡೂ ತಂಡದ ನಾಯಕರು ಪಂದ್ಯವನ್ನು ಡ್ರಾ ಮಾಡಲು ಒಪ್ಪಿಗೆ ಸೂಚಿಸಿದರು. ಇದನ್ನೂ ಓದಿ: ಕಿಂಗ್ ಕೊಹ್ಲಿ ಶತಕದ ವೈಭವ – ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 88 ರನ್ ಮುನ್ನಡೆ

Travis Head

ಕೊನೆಯದಿನದಾಟದಲ್ಲಿ ಆಸ್ಟ್ರೇಲಿಯಾ ಆರಂಭಿಕ ಟ್ರಾವಿಸ್ ಹೆಡ್ 163 ಎಸೆತಗಳಲ್ಲಿ 90 ರನ್ (10 ಬೌಂಡರಿ, 2 ಸಿಕ್ಸರ್) ಗಳಿಸಿ ಮಿಂಚಿದರು. ತಾಳ್ಮೆಯ ಆಟವಾಡಿದ ಮಾರ್ನಸ್ ಲಾಬುಶೇನ್ 213 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 63 ರನ್ ಹಾಗೂ ನಾಯಕ ಸ್ಟೀವ್ ಸ್ಮಿತ್ 10 ರನ್ ಗಳಿಸಿ ಅಜೇಯರಾಗುಳಿದರು. ಮ್ಯಾಥಿವ್ ಕುನ್ಹೆಮನ್ 6 ರನ್ ಗಳಿಸಿದರು.

ಕೊನೆಯದಿನದಾಟದಲ್ಲಿ ಭಾರತದ ಪರ ಆರ್.ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು. 

Virat Kohli 3

WTCಗೆ ಭಾರತ ತಂಡ ಹೀಗಿದೆ: ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲು ಭಾರತ ಬಲಿಷ್ಠ ಆಟಗಾರರ ತಂಡವನ್ನು ಆಯ್ಕೆ ಮಾಡಿದೆ. ರೋಹಿತ್ ಶರ್ಮಾ (Rohit Sharma) (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ದ್ ಪಟೇಲ್, ರವಿಚಂದ್ರನ್ ಅಶ್ಚಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್. ರಾಹುಲ್, ಇಶಾನ್ ಕಿಶಾನ್ ಹಾಗೂ ಕುಲ್‌ದೀಪ್ ಯಾದವ್ ತಂಡದಲ್ಲಿ ಇರಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *