– ಸಿಡ್ನಿಯಲ್ಲಿ ಸುನೀಲ್ ಗವಾಸ್ಕರ್‌ಗೆ ಅಪಮಾನ
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿ ಮುಕ್ತಾಯಗೊಂಡಿದ್ದು, ಭಾರತ ಹೀನಾಯ ಸೋಲಿನೊಂದಿಗೆ ಸರಣಿ ಸೋಲುಕಂಡಿದೆ. ಇದರೊಂದಿಗೆ ಟಿ20 ವಿಶ್ವಕಪ್ ಗೆದ್ದ ಬಳಿಕ ಏಕದಿನ ಮತ್ತು ಟೆಸ್ಟ್‌ನಲ್ಲಿ ಸತತ 3ನೇ ಸರಣಿಯಲ್ಲಿ ಭಾರತ ಸೋಲು ಕಂಡಿದೆ. ಟೀಂ ಇಂಡಿಯಾದ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ (Sunil Gavaskar) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಬ್ಯಾಟಿಂಗ್ ಕೋಚ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Sunil Gavaskar on India’s coaching staff. pic.twitter.com/8X2cFvQ3n7
— Mufaddal Vohra (@mufaddal_vohra) January 5, 2025
Advertisement
ಪಂದ್ಯದ ಬಳಿಕ ಸ್ಟಾರ್‌ಸ್ಫೋರ್ಟ್ಸ್ ಜೊತೆಗೆ ಮಾತನಾಡಿದ ಸುನೀಲ್ ಗವಾಸ್ಕರ್, ನಾನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ಬಗ್ಗೆ ಮಾತನಾಡುತ್ತಿಲ್ಲ. ಆದ್ರೆ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್‌ಗಳು ಏನ್ ಮಾಡ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸಿಡ್ನಿ ಪಂದ್ಯದಿಂದ ರೋಹಿತ್ ಔಟ್? – ಗೌತಮ್ ಗಂಭೀರ್ ಹೇಳಿದ್ದೇನು?
Advertisement
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಭಾರತ 46 ರನ್‌ಗಳಿಗೆ ಆಲೌಟ್ ಆಗಿದ್ದನ್ನು ನೋಡಿದ್ದೇವೆ. ಅಲ್ಲದೇ ಆ ಸರಣಿಯಲ್ಲೂ ಭಾರತ ಸೋಲು ಅನುಭವಿಸಿತು. ಬೌಲಿಂಗ್ ಪ್ರದರ್ಶನ ಉತ್ತಮವಾಗಿದೆ. ಆದ್ರೆ ಬ್ಯಾಟಿಂಗ್‌ನಲ್ಲಿ ಧಮ್ ಇಲ್ಲ. ನಾನೊಬ್ಬ ಟೆಸ್ಟ್ ಪ್ಲೇಯರ್ ಆಗಿ ಇದನ್ನ ಮಾತನಾಡ್ತಿದ್ದೇನೆ. ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ 2 ತಿಂಗಳ ಅಭ್ಯಾಸ ಇತ್ತು. ಈಗ ಕೋಚ್‌ಗಳು ಬ್ಯಾಟಿಂಗ್‌ನಲ್ಲಿ ಏನ್ ಇಂಪ್ರೂವ್ಮೆಂಟ್ ಆಗಿದೆ ಅಂತ ಹೇಳಲಿ ಎಂದು ಕಿಡಿಕಾರಿದ್ದಾರೆ.
Advertisement
Advertisement
ಸಿಡ್ನಿಯಲ್ಲಿ ಸುನೀಲ್ ಗವಾಸ್ಕರ್‌ಗೆ ಅಪಮಾನ
ಇನ್ನೂ ಸರಣಿ ಅಂತ್ಯದಲ್ಲಿ ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್‌ಗೆ ಆಯೋಜಕರು ಅಪಮಾನ ಮಾಡಿದ್ದಾರೆ ಎನ್ನಲಾಗಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸುನಿಲ್ ಗವಾಸ್ಕರ್ ಅವರಿಗೆ ಆಯೋಜಕರು ಅಪಮಾನ ಮಾಡಿದ್ದು, ಅವರ ಗೈರಿನಲ್ಲೇ ಪ್ರಶಸ್ತಿ ಪ್ರದಾನ ಮಾಡಿರುವ ಘಟನೆ ನಡೆದಿದೆ. ಇದನ್ನೂ ಓದಿ: ಭಾರತಕ್ಕೆ ಮತ್ತೆ ಹೀನಾಯ ಸೋಲು – ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಆಸೀಸ್ ಲಗ್ಗೆ
ಆಸ್ಟ್ರೇಲಿಯಾದ ಅಲನ್ ಬಾರ್ಡರ್ ಹಾಗೂ ಭಾರತದ ಸುನಿಲ್ ಗವಾಸ್ಕರ್ ಹೆಸರಿನಲ್ಲಿ ಈ ಸರಣಿ ನಡೆದಿತ್ತು. ಸರಣಿ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಬಾರ್ಡರ್ ಅವರು ಟ್ರೋಫಿಯನ್ನು ನೀಡಿದರು. ಆದ್ರೆ ಅದೇ ಸಮಯದಲ್ಲಿ ಗವಾಸ್ಕರ್, ಸ್ಥಳದಲ್ಲಿದ್ದರೂ ಅವರನ್ನು ನಿರ್ಲಕ್ಷಿಸಲಾಗಿತ್ತು. ಆದರೆ ಭಾರತ ವಿರುದ್ಧ ಸರಣಿ ಗೆದ್ದ ಬಳಿಕ ಆಸ್ಟ್ರೇಲಿಯಾ ತಂಡಕ್ಕೆ ಟ್ರೋಫಿ ನೀಡಲು ತಮ್ಮನ್ನು ಆಹ್ವಾನಿಸದಿದ್ದಕ್ಕಾಗಿ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಟದ ಮಧ್ಯೆಯೇ ಮೈದಾನ ತೊರೆದ ಬುಮ್ರಾ – ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ!