ಲಂಡನ್: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಹಾಗೂ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯ, ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಾಕ್ ಪಾರ್ಟಿಗೇಟ್ ಹಗರಣಕ್ಕೆ ಸಂಬಂಧ ಪಟ್ಟಂತೆ ಕ್ಷಮೆ ಯಾಚಿಸಿ, ದಂಡವನ್ನು ಭರಿಸಿದ್ದಾರೆ.
2020ರ ಜೂನ್‌ನಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಬೋರಿಸ್ ಜಾನ್ಸನ್ ಅವರ ಹುಟ್ಟುಹಬ್ಬದಲ್ಲಿ ಭಾಗವಹಿಸಿದ ರಿಷಿ ಸುನಾಕ್ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ಗಿಫ್ಟ್ ಆಗಿ ಬಂದ ನೆಕ್ಲೆಸ್‌ನ್ನು 18 ಕೋಟಿಗೆ ಮಾರಿದ್ದಕ್ಕೆ ಇಮ್ರಾನ್ ಖಾನ್ ವಿರುದ್ಧ ತನಿಖೆ
Advertisement
Advertisement
ಆರಂಭದಲ್ಲಿ ಯಾವುದೇ ಕಾನೂನುಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದ ಜಾನ್ಸನ್ ಬಳಿಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಈ ವೇಳೆ ಕ್ಷಮೆ ಯಾಚಿಸಿದ ಜಾನ್ಸನ್, ದಂಡವನ್ನು ಪಾವತಿಸಿರುವುದನ್ನು ದೃಢಪಡಿಸಿದ ಬಳಿಕ ರಿಷಿ ಸುನಾಕ್ ಕೂಡ ಕ್ಷಮೆ ಯಾಚಿಸಿದ್ದಾರೆ. ಇದನ್ನೂ ಓದಿ: ಪಾಕ್ ಸೇನಾ ಮುಖ್ಯಸ್ಥರಿಗೆ ಅವಮಾನ – ಇಮ್ರಾನ್ ಖಾನ್ ಸಾಮಾಜಿಕ ಮಾಧ್ಯಮ ತಂಡ ಅರೆಸ್ಟ್
Advertisement
2020-21ರ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ವೈಟ್‌ಹೌಸ್‌ನಲ್ಲಿರುವ ಡೌನಿಂಗ್ ಹಾಗೂ ಇತರ ಬ್ರಿಟನ್ನಿನ ಸರ್ಕಾರಿ ಕಚೇರಿಗಳಲ್ಲಿ ಸುಮಾರು 12 ಔತಣಕೂಟಗಳು ನಡೆದಿದೆ ಎಂದು ವರದಿಯಾಗಿತ್ತು. ಇದನ್ನು ಪಾರ್ಟಿಗೇಟ್ ಹಗರಣ ಎಂದು ಕರೆಯಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದರು.