ಲಂಡನ್: ಬ್ರಿಟನ್‌ನ (Britain) ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ತಮ್ಮ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2020ರಲ್ಲಿ ಕೊರೊನಾ (Corona) ಸಮಯದಲ್ಲಿ ಲಾಕ್‌ಡೌನ್ (Lockdown) ನಿಯಮಗಳನ್ನು ಉಲ್ಲಂಘಿಸಿ ಔತಣಕೂಟ ಮಾಡಿದ್ದಕ್ಕೆ ಬೋರಿಸ್ ಜಾನ್ಸನ್ ಈ ಹಿಂದೆ ಬ್ರಿಟನ್‌ನ ಪ್ರಧಾನಿ (Biritain PM) ಹುದ್ದೆಯನ್ನು ಕಳೆದುಕೊಂಡಿದ್ದರು.
ಪಾರ್ಟಿ ಗೇಟ್ (Partygate) ಹಗರಣಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ಸಂಸತ್ತಿನ ಹೌಸ್ ಆಫ್ ಕಾಮನ್ಸ್ ಮಾಜಿ ಪ್ರಧಾನಿ ಅವರಿಗೆ ಪತ್ರವೊಂದನ್ನು ಬರೆದಿದೆ. ಅಂದು ಔತಣಕೂಟದಲ್ಲಿ ಕೊರೊನಾಗೆ ಸಂಬಂಧಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿರುವುದಾಗಿ ಜಾನ್ಸನ್ ಹೇಳಿದ್ದರು. ಈ ಕುರಿತು ಹೌಸ್ ಆಫ್ ಕಾಮನ್ಸ್ ಸಮಿತಿ ಪತ್ರ ಬರೆದು ಸ್ಪಷ್ಟೀಕರಣ ಕೇಳಿರುವ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಸಂಸತ್ ಸದಸ್ಯತ್ವವನ್ನು ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಟರ್ಕಿ ಹಡಗು ಹೈಜಾಕ್- ಕಾರ್ಯಾಚರಣೆಗಿಳಿದ ಇಟಲಿ ಸೇನಾ ಪಡೆ
ಈ ಬಗ್ಗೆ ತಿಳಿಸಿರುವ ಬೋರಿಸ್, ಹೌಸ್ ಆಫ್ ಕಾಮನ್ಸ್ ಕಳುಹಿಸಿರುವ ಪತ್ರದಿಂದ ತಮಗೆ ಆಘಾತವಾಗಿದೆ ಎಂದು ಹೇಳಿದ್ದಾರೆ. ಬಹುಪಾಲು ಕನ್ಸರ್ವೇಟಿವ್ ಸಂಸದರನ್ನು ಹೊಂದಿರುವ ಸಂಸದ ನೇತೃತ್ವದ ಸಮಿತಿ ಸೋಮವಾರ ತನ್ನ ವಿಚಾರಣೆಯನ್ನು ಮುಕ್ತಾಯಗೊಳಿಸಲಿದೆ. ತನ್ನ ವರದಿಯನ್ನು ಶೀಘ್ರವೇ ಪ್ರಕಟಿಸುವುದಾಗಿ ಹೇಳಲಾಗಿದೆ. ಇದನ್ನೂ ಓದಿ: ರೋಚಕ ಘಟನೆ- ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು