ನವದೆಹಲಿ: ಬೆಂಗಳೂರು ಸೆಂಟ್ರಲ್ (Bengaluru Central) ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಕಾಂಗ್ರೆಸ್ (Congress) ನಾಯಕ ಭರ್ತೋಲಮ್ (Bortholom Bilekahalli) ತೀವ್ರ ಲಾಬಿ ಆರಂಭಿಸಿದ್ದಾರೆ. ದೆಹಲಿಯಲ್ಲಿ (New Delhi) ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿರುವ ಅವರು ಅಲ್ಪಸಂಖ್ಯಾತ ಕೋಟಾದಲ್ಲಿ ಕ್ರಿಶ್ಚಿಯನ್ನರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಮನ್ಸೂರ್ ಅಲಿ ಖಾನ್ ಹೆಸರು ಕೇಳಿ ಬಂದ ಬೆನ್ನಲ್ಲೇ ಸೋನಿಯಗಾಂಧಿ ಭೇಟಿಗೆ ಯತ್ನಿಸಿರುವ ಅವರು, ಕಡೇ ಕ್ಷಣದಲ್ಲಿ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಮೂವತ್ತು ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದಲ್ಲೂ ಎಲ್ಲಾ ರೀತಿಯ ಕೆಲಸ ಮಾಡಿದ್ದೇನೆ. ಶಾಸಕರ ವಿಶ್ವಾಸವನ್ನು ಗಳಿಸಿದ್ದೇನೆ. ಆದರೂ ಟಿಕೆಟ್ ನೀಡುವಾಗ ಕೇವಲ ಮುಸ್ಲಿಂ ಸಮುದಾಯವನ್ನು ಪರಿಗಣಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
Advertisement
ಮನ್ಸೂರ್ ಅಲಿ ಖಾನ್ ಏನು ಕೆಲಸ ಮಾಡಿದ್ದಾರೆ ಹೇಳಬೇಕು. ಕೆಲಸ ಮಾಡಿದವರನ್ನು ಬಿಟ್ಟು ಕೆಲಸ ಮಾಡದವರಿಗೆ ಟಿಕೆಟ್ ನೀಡುವ ಪ್ರಯತ್ನ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಅಲ್ಪಸಂಖ್ಯಾತ ಎಂದರೆ ಬರೀ ಮುಸ್ಲಿಂ ಅಲ್ಲ, ಕ್ರಿಶ್ಚಿಯನ್ ಸಮುದಾಯವೂ ಕ್ಷೇತ್ರದಲ್ಲಿ ದೊಡ್ಡ ಸಂಖ್ಯೆಯಲ್ಲಿದೆ. ಈ ಹಿನ್ನೆಲೆ ನಮ್ಮನ್ನು ಪರಿಗಣಿಸಲು ಮನವಿ ಮಾಡುತ್ತಿದ್ದೇವೆ. ಆದರೆ ಈ ಬಾರಿ ಇಲ್ಲ. ಮುಂದಿನ ಬಾರಿಗೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.