ಒಂದೇ ವೇದಿಕೆಯಲ್ಲಿ ನಿಖಿಲ್-ಪ್ರಜ್ವಲ್ – ಪಕ್ಷ ಕಟ್ಟಲು ಪಣತೊಟ್ಟ ಸಹೋದರರು

Public TV
2 Min Read
NIKHIL AND PRAJWAL bengaluru 1

– ಕುಟುಂಬದಲ್ಲಿಯೂ ನಾವು ಒಂದೇ, ಪಕ್ಷದಲ್ಲಿ ಕೂಡ ಒಂದೇ

ಬೆಂಗಳೂರು: ನಾಲ್ಕು ದಿನಗಳಿಂದ ಬಿಡದಿ ತೋಟದಲ್ಲಿ ನಡೆದ ಜನತಾ ಪರ್ವ 1.0 ಹಾಗೂ ಮಿಷನ್ 123 ಕಾರ್ಯಗಾರದಲ್ಲಿ ಇಂದು ಜನತಾದಳದ ಯುವ ಪರಿವಾರವನ್ನು ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಜೋಡಿ ಸಮ್ಮೋಹನಗೊಳಿಸಿತು.

NIKHIL AND PRAJWAL bengaluru 6

ಇಬ್ಬರು ಯುವ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಾಗ ಸುಮಾರು 500ಕ್ಕೂ ಹೆಚ್ಚು ಯುವ ಪ್ರತಿನಿಧಿಗಳು ಖುಷಿಯಿಂದ ಕೇಕೆ ಹಾಕಿದರು. ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ಉತ್ತರ ಕೊಟ್ಟ ಅವರಿಬ್ಬರೂ, ಕುಟುಂಬದಲ್ಲಿಯೂ ನಾವು ಒಂದೇ. ಪಕ್ಷದಲ್ಲಿ ಕೂಡ ಒಂದೇ. ನಮ್ಮನ್ನು ಬೇರೆ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಘೋಷಿಸಿದರು. ಇದನ್ನೂ ಓದಿ: ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್ 

NIKHIL AND PRAJWAL bengaluru 2

ಕಾರ್ಯಾಗಾರದಲ್ಲಿ ಮೊದಲು ಮಾತನಾಡಿದ ಪ್ರಜ್ವಲ್ ರೇವಣ್ಣ, ಅಣ್ಣ-ತಮ್ಮಂದಿರಾಗಿ ನಾವು ಯಾವತ್ತಿಗೂ ಒಂದೇ. ರಾಜ್ಯದಲ್ಲಿ ಪಕ್ಷ ಕಟ್ಟಲು ನಾವಿಬ್ಬರು ಒಂದಾಗಿ ಇದ್ದೇವೆ. ಕುಮಾರಣ್ಣ ಅವರನ್ನು ಮತ್ತೆ ಸಿಎಂ ಮಾಡಲು ನಾವು ಇಬ್ಬರು ಯಾವಾಗಲೂ ಒಂದಾಗಿ ಇರ್ತೀವಿ, ಪಕ್ಷದ ಕೆಲಸ ಮಾಡುತ್ತೇವೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ತಿಳಿಸಿದರು.

NIKHIL AND PRAJWAL bengaluru 3

ಇಬ್ಬರು ಧರ್ಮಸ್ಥಳ ಹಾಗೂ ಚಾಮುಂಡಿ ಬೆಟ್ಟಕ್ಕೆ ಹೋಗುತ್ತೇವೆ. ಮೈಸೂರಿಗೆ ಮೊದಲು ಹೋಗಿ ತಾಯಿ ಚಾಮುಂಡೇಶ್ವರಿ ಅಮ್ಮನ ಆಶೀರ್ವಾದ ಪಡೆದು ಕಾರ್ಯಕ್ರಮ ಮಾಡುತ್ತೇವೆ. ಅಲ್ಲಿಂದಲೇ ಯುವಕರನ್ನು ಒಟ್ಟುಗೂಡಿಸುತ್ತೇವೆ. ಇವತ್ತು ನಮ್ಮಿಬ್ಬರನ್ನು ನೋಡಿ ಕುಮಾರಣ್ಣಗೆ ಬಹಳ ಸಂತೋಷವಾಗಿದೆ ಎಂದು ಪ್ರಜ್ವಲ್ ಹೇಳಿದರು. ಇದನ್ನೂ ಓದಿ:  ಕೋವಿಡ್ ಮುಂಜಾಗ್ರತೆಯೊಂದಿಗೆ ಶಿವಮೊಗ್ಗದಲ್ಲಿ ವೈಭವದ ದಸರಾ ಆಚರಣೆಗೆ ಸಿದ್ಧತೆ: ಕೆ.ಎಸ್ ಈಶ್ವರಪ್ಪ

NIKHIL AND PRAJWAL bengaluru 5

ನಂತರ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ನನ್ನ ತಮ್ಮ. ಒಂದೇ ವೇದಿಕೆಯಲ್ಲಿ ಕಾಣಿಸಲ್ಲ ಅಂತಿದ್ದರು. ಇವತ್ತು ಜೊತೆಯಲ್ಲಿದ್ದೇವೆ. ಯಾವತ್ತೂ ಇರುತ್ತೇವೆ. ಅನುಮಾನವೇ ಬೇಡ. ಇವತ್ತು ನಾವು ಬೇರೆ ಬೇರೆ ಎಂದು ಬಿಂಬಿಸಿದ್ದವರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸಿದ್ದೇನೆ ಎಂದರು.

2023 ನಮ್ಮದೇ ಎಂಬ ಸಂಕಲ್ಪ ಬಲದಿಂದ ಮುಂದೆ ಹೋಗೋಣ. ನಮ್ಮ ಪಕ್ಷದ ಸರ್ಕಾರ ಬರಲು ಎಲ್ಲ ಶ್ರಮವನ್ನು ಹಾಕೋಣ. ನಾನು ಮತ್ತು ಪ್ರಜ್ವಲ್ ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತೇವೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *