ಬಾಲಿವುಡ್ ನಟಿ ಆಲಿಯಾ ಭಟ್ ಮದುವೆಯಾದ ಮೂರೇ ತಿಂಗಳಲ್ಲಿ ತಾವು ತಾಯಿ ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದರು. ಈ ಸಂಭ್ರಮವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಸಂತಸ ಪಡಬೇಕಾಗಿದ್ದ ಗಳಿಗೆಯಲ್ಲಿ ನಟಿ ಆಲಿಯಾ ಭಟ್ ನೊಂದುಕೊಂಡರು. ಕಾರಣ ಅವರಿಗೆ ಮಾಡಿದ ಕಾಮೆಂಟ್. ಮದುವೆಗೂ ಮುನ್ನ ಆಲಿಯಾ ಭಟ್ ಪ್ರಗ್ನಂಟ್ ಆಗಿದ್ದರು ಎಂದು ಹಲವರು ಕಾಮೆಂಟ್ ಮಾಡಿದ್ದರು. ಮತ್ತಷ್ಟು ಜನರು ಪಗ್ನೆಂಟ್ ಆಗಿದ್ದರು ಎನ್ನುವ ಕಾರಣಕ್ಕಾಗಿಯೇ ಮದುವೆಯಾಗಿದ್ದಾರೆ ಎಂದು ಮಾತನಾಡಿಕೊಂಡಿದ್ದರು.
ಪಗ್ನಂಟ್ ನಂತರವೂ ಆಲಿಯಾ ಭಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಪ್ರಮೋಷನ್ ಗಳಲ್ಲಿ ಭಾಗಿಯಾಗುತ್ತಾರೆ. ಹಾಗಾಗಿ ಅದಕ್ಕೂ ಕೆಲವರು ನೆಗೆಟಿವ್ ಆಗಿ ಮಾತನಾಡುತ್ತಿದ್ದಾರೆ. ಪ್ರಚಾರ ಪಡೆಯಲೆಂದೇ ಅವರು ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ನಿಜವಾಗಿಯೂ ಪಗ್ನೆಂಟ್ ಆಗಿದ್ದೀರಾ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಆಲಿಯಾ ಭಟ್ ಗರಂ ಆಗಿದ್ದಾರೆ. ಇದನ್ನೂ ಓದಿ:ಕಿಚ್ಚ ಸುದೀಪ್ ಅವರನ್ನು ವಿಶ್ವದ ಬಾಕ್ಸ್ ಆಫೀಸಿಗೆ ಹೋಲಿಸಿದ ಉಪೇಂದ್ರ
ವೃತ್ತಿ ಮತ್ತು ವೈಯಕ್ತಿಕ ಜೀವನ ಬೇರೆ ಬೇರೆ. ಒಂದಕ್ಕೊಂದು ಹೋಲಿಸಬೇಡಿ. ನಾನು ಎರಡನ್ನೂ ಪ್ರೀತಿಸುವವಳು. ಮತ್ತಷ್ಟು ದಿನ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ. ನನ್ನ ವೈಯಕ್ತಿಕ ಜೀವನದ ಬಗ್ಗೆ ಕಾಮೆಂಟ್ ಮಾಡಲು ಯಾರಿಗೂ ಹಕ್ಕಿಲ್ಲ ಎಂದು ಹೇಳಿದ್ದಾರೆ. ಇದೇ ಮುಂದುವರೆದರೆ ಖಾರವಾಗಿಯೇ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಆಲಿಯಾ ಪ್ರತಿಕ್ರಿಯೆ ನೀಡಿದ್ದಾರೆ.