– ರಾಗಾ ಹೇಳಿಕೆಗೆ ಓಂ ಬಿರ್ಲಾ ಸ್ಪಷ್ಟನೆ
ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾದಾಗ ತಲೆಬಾಗಿ ನಮಸ್ಕರಿಸಿದ್ದರು. ಆದರೆ ರಾಹುಲ್ ಗಾಂಧಿ ಮುಂದೆ ನೇರವಾಗಿ ನಿಂತು ಕೈ ಕುಲುಕಿದ್ದರು. ಈ ವಿಚಾರವನ್ನು ವಿರೋಧ ಪಕ್ಷದ ನಾಯಕ ರಾಗಾ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು.
Advertisement
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ (Rahul Gandhi), ಲೋಕಸಭಾ ಸ್ಪೀಕರ್ ಆಯ್ಕೆ ದಿನವನ್ನು ಉಲ್ಲೇಖಿಸಿ, ನಾನು ನಿಮ್ಮೊಂದಿಗೆ ಕೈಕುಲುಕಿದಾಗ ನೀವು ನೇರವಾಗಿ ನಿಂತು ನನ್ನ ಕೈಕುಲುಕಿದ್ದೀರಿ. ಆದರೆ ಮೋದಿಜಿ ಕೈಕುಲುಕಿದಾಗ ತಲೆಬಾಗಿ ನಮಸ್ಕರಿಸಿ ಕೈಕುಲುಕಿದ್ದೀರಿ ಎಂದು ಹೇಳಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದು, ಇದು ಪೀಠಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಇಡೀ ಹಿಂದೂ ಸಮಾಜ ಅವಮಾನಿಸಿದ್ದಾರೆ: ಅಶ್ವಿನಿ ವೈಷ್ಣವ್
Advertisement
Advertisement
ರಾಹುಲ್ ಗಾಂಧಿಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್ ಓಂ ಬಿರ್ಲಾ (Om Birla) ಅವರು, ಪ್ರಧಾನಿಯವರು ಸದನದ ನಾಯಕ. ಸಾರ್ವಜನಿಕ ಜೀವನದಲ್ಲಿ ಮತ್ತು ವೈಯಕ್ತಿಕ ಜೀವನದಲ್ಲಿ ನಮಗಿಂತ ಹಿರಿಯರನ್ನು ಭೇಟಿಯಾದಾಗ ಅವರಿಗೆ ತಲೆಬಾಗಿ ನಮಸ್ಕರಿಸಿ ಗೌರವ ನೀಡುವುದು ನಮ್ಮ ಸಂಸ್ಕೃತಿಯಾಗಿದೆ. ನಾನು ಈ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅನುಸರಿಸುತ್ತೇನೆ. ಹಿರಿಯರಿಗೆ ನಮಸ್ಕರಿಸುವುದು ಮತ್ತು ಅಗತ್ಯವಿದ್ದರೆ ಅವರ ಪಾದಗಳನ್ನು ಮುಟ್ಟುವುದು ಕೂಡ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
ಬಿರ್ಲಾ ಮಾತಿಗೆ ಮತ್ತೆ ಪ್ರತಿಕ್ರಿಯಿಸಿದ ರಾಗಾ, ಸ್ಪೀಕರ್ ಅವರ ಮಾತನ್ನು ಗೌರವಿಸುತ್ತೇನೆ. ಆದರೆ ಈ ಸದನದಲ್ಲಿ ನಿಮಗಿಂತ ದೊಡ್ಡವರು ಯಾರೂ ಇಲ್ಲ. ಇಲ್ಲಿ ನಿಮ್ಮ ಮಾತೇ ಕೊನೆಯದು. ಎಲ್ಲರೂ ನಿಮ್ಮನ್ನು ಗೌರವಿಸಬೇಕು. ನಾನು ನಿಮ್ಮ ಮುಂದೆ ತಲೆಬಾಗುತ್ತೇನೆ ಮತ್ತು ಇಡೀ ಪ್ರತಿಪಕ್ಷಗಳು ನಿಮ್ಮ ಮುಂದೆ ತಲೆಬಾಗುತ್ತವೆ. ಲೋಕಸಭಾ ಸದಸ್ಯರಾದ ನಾವು ಸ್ಪೀಕರ್‌ಗೆ ಅಧೀನರಾಗಿದ್ದೇವೆ. ನೀವು ಏನು ಹೇಳಿದರೂ ನಾವು ಕೇಳುತ್ತೇವೆ. ಆದರೆ ಸದನದಲ್ಲಿ ನಿಷ್ಪಕ್ಷಪಾತವಾಗಿರುವುದು ಮುಖ್ಯ ಎಂದು ಹೇಳಿದರು.