ಶಾರುಖ್ ಖಾನ್ ನಟನೆಯ ಪಠಾಣ್ (Pathan) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದೆ. ಸಿನಿಮಾ ರಿಲೀಸ್ ಆಗಿ 27ನೇ ದಿನಕ್ಕೆ ಸಾವಿರ ಕೋಟಿ (Thousand Crore) ಕ್ಲಬ್ (Club) ಸೇರಿದೆ. ಈ ವರ್ಷದಲ್ಲಿ ರಿಲೀಸ್ ಆದ ಬಾಲಿವುಡ್ ಸಿನಿಮಾಗಳಲ್ಲಿ ಅತೀ ಹೆಚ್ಚು ಹಣ ಮಾಡಿದ ಚಿತ್ರ ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿದೆ. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಪಠಾಣ್ ಸಿನಿಮಾದ ಹಾಡೊಂದು ವಿವಾದಕ್ಕೀಡಾದಾಗ ಈ ಸಿನಿಮಾವನ್ನು ಗೆಲ್ಲಿಸಲೇಬಾರದು ಎಂದು ಹಲವರು ಕರೆ ನೀಡಿದರು. ಪ್ರತಿಭಟನೆಗಳು ನಡೆದವು, ಬಾಯ್ಕಾಟ್ ಪಠಾಣ್ ಅಭಿಯಾನ ಶುರುವಾಯಿತು. ಚಿತ್ರಮಂದಿರಗಳ ಮೇಲೆ ದಾಳಿ ನಡೆದವು. ಸಿನಿಮಾದ ಪೋಸ್ಟರ್ ಹರಿದು ಹಾಕಲಾಯಿತು. ಪೋಸ್ಟರ್ ಸುಡಲಾಯಿತು. ಏನೆಲ್ಲ ಸಂಕಷ್ಟಗಳು ಎದುರಾದರೂ, ಪಠಾಣ್ ಮಾತ್ರ ಗೆಲುವು ಸಾಧಿಸಿದೆ.
ಪಠಾಣ್ ಒಂದೊಳ್ಳೆ ಸಿನಿಮಾ. ಎಲ್ಲರ ಮೆಚ್ಚುಗೆಗೂ ಅದು ಪಾತ್ರವಾಗಲಿದೆ. ದೇಶಭಕ್ತಿ ಸಾರುವಂತಹ ಕಥೆಯನ್ನು ಇದು ಒಳಗೊಂಡಿದೆ ಎಂದು ಶಾರುಖ್ ಹೇಳಿದರೂ, ವಿರೋಧಿಗಳು ಮಾತ್ರ ಕೇಳಲಿಲ್ಲ. ಕೆಲವು ರಾಜ್ಯಗಳಲ್ಲಿ ಸಿನಿಮಾವನ್ನು ನಿಷೇಧ ಮಾಡುವಂತೆ ಒತ್ತಡ ತರಲಾಯಿತು. ಕೊನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಿದರು. ಆದರೂ, ಪ್ರತಿಭಟನೆ ಮಾತ್ರ ನಿಲ್ಲಲಿಲ್ಲ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್
ಪಠಾಣ್ ಸಿನಿಮಾಗಾಗಿ ಇಡೀ ಬಾಲಿವುಡ್ ಒಂದಾಯಿತು. ಈ ಸಿನಿಮಾವನ್ನು ಗೆಲ್ಲಿಸುವ ಮೂಲಕ ಬಾಲಿವುಡ್ ಗೆಲ್ಲಿಸೋಣ ಎನ್ನುವ ಮಾತು ಕೇಳಿ ಬಂತು. ಹಾಗಾಗಿ ಶಾರುಖ್ ವಿರೋಧಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿ ಮಾತನಾಡಿದರು. ಮೊದ ಮೊದಲು ತೆಗಳುತ್ತಿದ್ದವರು, ಆ ಮೇಲೆ ಸಿನಿಮಾ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದರು. ಇದೆಲ್ಲದರ ಪರಿಣಾಮ ಇದೀಗ ಪಠಾಣ್ ಸಾವಿರ ಕೋಟಿ ಬಾಚಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k