ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ. ಈ ಮಾದರಿಯ ಸಿನಿಮಾಗಳಲ್ಲೇ ಅತೀ ಕಡಿಮೆ ಸಮಯದಲ್ಲಿ ಇಷ್ಟೊಂದು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ.
ಈ ಕುರಿತು ಬಾಲಿವುಡ್ ಖ್ಯಾತ ಟ್ರೇಡ್ ಅನಾಲಿಸಿಸ್ಟ್ ಟ್ವೀಟ್ ಕೂಡ ಮಾಡಿದ್ದು, ಆಯಾ ದಿನದ ಗಳಿಕೆಯ ಲೆಕ್ಕ ಕೊಟ್ಟಿದ್ದಾರೆ. ಮೊದಲ ದಿನ 3.55 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದರೆ, ಎರಡನೇ ದಿನದ ಗಳಿಕೆ 8.50 ಕೋಟಿ, ಮೂರನೇ ದಿನ 15.10 ಕೋಟಿ, ನಾಲ್ಕನೇ ದಿನ 15.06 ಕೋಟಿ, ಐದನೇ ದಿನಕ್ಕೆ 18 ಕೋಟಿಯ ಭರ್ಜರಿ ಕಲೆಕ್ಷನ್ ಮಾಡಿದೆ. ಇದನ್ನೂ ಓದಿ : ಶಿವರಾಜ್ ಕುಮಾರ್ ಎದುರು ಅಖಾಡಕ್ಕೆ ಇಳಿದ ಡಾಲಿ ಧನಂಜಯ್
ಸಾಮಾನ್ಯವಾಗಿ ವೀಕೆಂಡ್ ನಲ್ಲಿ ಕಲೆಕ್ಷನ್ ಜೋರಾಗಿರುತ್ತದೆ. ಆದರೆ, ಸಾಮಾನ್ಯ ದಿನದಲ್ಲೇ ಈ ಚಿತ್ರ 18 ಕೋಟಿ ರೂಪಾಯಿ ಗಳಿಕೆ ಮಾಡುವುದರೊಂದಿಗೆ ಹೊಸ ದಾಖಲೆ ಬರೆದಿದೆ. ಈ ಮೂಲಕ ಅತೀ ಶೀಘ್ರದಲ್ಲೇ ನೂರು ಕೋಟಿ ಕ್ಲಬ್ ಗೆ ಈ ಸಿನಿಮಾ ಸೇರಲಿದೆ.
ಅಂಥದ್ದೇನಿದೆ ಈ ಸಿನಿಮಾದಲ್ಲಿ ?
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ 1990ರಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಸಿನಿಮಾ ಮಾಡಿದ್ದಾರೆ. ಅದನ್ನು ‘ದಿ ಕಾಶ್ಮೀರ್ ಫೈಲ್ಸ್’ ಹೆಸರಿನಲ್ಲಿ ಬಿಡುಗಡೆ ಮಾಡಿದ್ದಾರೆ. ಸಿನಿಮಾದ ಶೀರ್ಷಿಕೆಯೇ ಪ್ರಚುರಪಡಿಸುವಂತೆ ನರಮೇಧದ ಹಿಂದಿರುವ ಇತಿಹಾಸವನ್ನು ಬಿಚ್ಚಿಡುವಂತಹ ‘ಫೈಲ್’ ಇದಾಗಿದೆ. ಈ ‘ಫೈಲ್’ ನ ಪುಟಪುಟದಲ್ಲೂ ರಕ್ತಸಿಕ್ತ ಅಧ್ಯಾಯಗಳಿವೆ. ಬರೆದ ಶಾಹಿ ಕೂಡ ಕೆಂಪಾಗಿದೆ. ಇಂತಹ ಹತ್ಯಾಕಾಂಡವನ್ನು ಸಿನಿಮಿಯ ರೂಪದಲ್ಲಿ ತರದೇ, ನಡೆದ ಘಟನೆಯನ್ನು ಹಸಿಹಸಿಯಾಗಿಯೇ ತರುವ ಪ್ರಯತ್ನ ಈ ಸಿನಿಮಾದಲ್ಲಿ ಆಗಿದೆ. ಇದನ್ನೂ ಓದಿ : ಮಿಷನ್ ಇಂಪಾಸಿಬಲ್ ಚಿತ್ರದಲ್ಲಿ ರಿಷಭ್ ಶೆಟ್ಟಿ: ತಾಪ್ಸಿ ಪನ್ನು ನಾಯಕಿ
ಸಾಮಾನ್ಯವಾಗಿ ಸಿನಿಮಾಗಳೆಂದರೆ ನಾಟಕೀಯ ನಿರೂಪಣೆಗೆ ಹೆಚ್ಚು ಒತ್ತು ಕೊಡಲಾಗುತ್ತದೆ. ಕಥೆಯ ಕುತೂಹಲವನ್ನು ಕಾಪಿಡಲು ಅಲ್ಲಲ್ಲಿ, ನಾಟಕೀಯ ತಿರುವುಗಳನ್ನೂ ನೀಡಲಾಗುತ್ತದೆ. ಪ್ರೇಕ್ಷಕನ ಆಸಕ್ತಿಯ ಅನುಗುಣವಾಗಿ ಪಾತ್ರಕ್ಕೆ ಹಿನ್ನೆಲೆ ಒದಗಿಸಲಾಗುತ್ತದೆ. ‘ದಿ ಕಾಶ್ಮೀರ್ ಫೈಲ್ಸ್’ ನಲ್ಲಿ ಅದ್ಯಾವ ಗೋಜಿಗೂ ನಿರ್ದೇಶಕರು ಹೋಗಿಲ್ಲ. ತಮ್ಮ ಸಂಶೋಧನೆಯಲ್ಲಿ ಕಂಡುಂಡ ಕಥನವನ್ನು ಹಾಗೆಯೇ ಬಿಚ್ಚಿಡುತ್ತಾ ಹೋಗಿದ್ದಾರೆ. ಹಾಗಾಗಿ ಚಿತ್ರದ ತುಂಬಾ ಮನಸ್ಸಿಗೆ ಘಾಸಿಯಾಗುವಷ್ಟು ಕ್ರೌರ್ಯವೇ ತುಂಬಿದೆ. ಅದೊಂದು ಹತ್ಯಾಕಾಂಡದ ಕಥೆಯೇ ಆಗಿದ್ದರಿಂದ ತೆರೆಯ ಮೇಲೂ ಅದನ್ನೇ ಮೂಡಿಸಿದ್ದಾರೆ. ಇದನ್ನೂ ಓದಿ : ಹಿಂದಿ ಆಯ್ತು, ಇದೀಗ ಮರಾಠಿಯಲ್ಲೂ ಕನ್ನಡದ ದಿಯಾ
ಪುಷ್ಕರ್ ನಾಥ್ ಪಂಡಿತ್ (ಅನುಪಮ್ ಖೇರ್) ಪಾತ್ರವನ್ನು ಮುಖ್ಯವಾಗಿಟ್ಟುಕೊಂಡು ಕಥೆಯನ್ನು ಹೇಳುತ್ತಾ ಸಾಗುವ ನಿರ್ದೇಶಕರು, ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಮೊಮ್ಮಗನಿಗೆ ತನ್ನ ಕುಟುಂಬದ ಇತಿಹಾಸ ಹೇಳುತ್ತಾ ಸಾಗುವ ಕಥನ ಕ್ರಮದಲ್ಲಿ ಇಡೀ ಸಿನಿಮಾ ಸಾಗುತ್ತದೆ. ಈ ಪುಷ್ಕರ್ ನಾಥ್ ಮೂಲಕ ಕಾಶ್ಮೀರಿ ಪಂಡಿತರ ಮೇಲಾದ ದಾಳಿಯನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಾ ಸಾಗುತ್ತಾರೆ ನಿರ್ದೇಶಕರು. ಈ ಕಥನ ಕವಲುಗಳಲ್ಲಿ ಮಾಧ್ಯಮ, ರಾಜಕಾರಣ, ಭಯೋತ್ಪಾದನೆ, ಕೋಮುಗಲಭೆ, ಮತಾಂತರ, ಎರಡು ಕೋಮಿನ ನಡುವಿನ ಸಂಘರ್ಷ ಹೀಗೆ ಸಾಕಷ್ಟು ಘಟನೆಗಳು ದೃಶ್ಯಗಳಾಗಿ ಬಂದು ಹೋಗುತ್ತವೆ. ಇದೊಂದು ಒಪ್ಪಿತ ಸಿನಿಮಾ ಮಾಧ್ಯಮವಾಗಿರುವುದರಿಂದ ನಿರ್ದೇಶಕ ತನ್ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು, ಅವನದ್ದೇ ಆದ ರೀತಿಯಲ್ಲಿ ಅಂತ್ಯ ಕೊಡುತ್ತಾನೆ. ಅಲ್ಲಿಗೆ ನೋಡುಗನ ಮನಸ್ಸು ಹದಗೊಳ್ಳುವುದೇ ಬೇರೆ ರೀತಿಯಾಗಿ. ಅಷ್ಟರ ಮಟ್ಟಿಗೆ ಸಿನಿಮಾ ನೋಡುಗನ ಎದೆಯೂರಿ ಹೆಚ್ಚಿಸುತ್ತದೆ.