ಬಾಲಿವುಡ್ ನಲ್ಲಿ ಸ್ಟಾರ್ ವಾರ್ ಹೊಸದೇನೂ ಅಲ್ಲ. ಆದರೂ, ಹೊಂದಾಣಿಕೆಯ ಮೇಲೆ ಸಿನಿಮಾಗಳನ್ನು ರಿಲೀಸ್ ಮಾಡಿಕೊಂಡು ಬರಲಾಗುತ್ತಿದೆ. ಆದರೆ, ಈ ಬಾರಿ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಮತ್ತೆ ಮುಖಾಮುಖಿ ಆಗುತ್ತಿದ್ದಾರೆ. ಏಪ್ರಿಲ್ 10ರಂದು ಅಕ್ಷಯ್ ಕುಮಾರ್ ನಟನೆಯ ಬಡೆ ಮಿಯಾ ಚೋಟೆ ಮಿಯಾ ಹಾಗೂ ಅಜಯ್ ದೇವಗನ್ ಅವರ ಮೈದಾನ (Maidan) ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಹೀಗೆ ಈ ಕಲಾವಿದರ ಚಿತ್ರಗಳು ಒಂದೇ ದಿನಾಂಕದಂದು ರಿಲೀಸ್ ಆಗುತ್ತಿರುವುದು 9ನೇ ಬಾರಿ ಎನ್ನುವುದು ವಿಶೇಷ.
Advertisement
ಮೊನ್ನೆಯಷ್ಟೇ ಅಕ್ಷಯ್ ಕುಮಾರ್ (Akshay Kumar) ಹಾಗೂ ಟೈಗರ್ ಶ್ರಾಫ್ (Tiger Shroff) ನಟನೆಯ ಬಡೆ ಮಿಯಾ ಚೋಟೆ ಮಿಯಾ (bade miyan chote miyan) ಸಿನಿಮಾದ ಟ್ರೈಲರ್ (Trailer) ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ 3 ಸೆಕೆಂಡ್ ಇರುವ ಪವರ್ ಪ್ಯಾಕ್ಡ್ ಟ್ರೈಲರ್ ನಲ್ಲಿ ಅಕ್ಷಯ್ ಹಾಗೂ ಟೈಗರ್ ಭರ್ಜರಿ ಆಕ್ಷನ್ ಮೂಲಕ ಅಬ್ಬರಿಸಿದ್ದಾರೆ.
Advertisement
Advertisement
ಬಡೆ ಮಿಯಾ ಚೋಟೆ ಮಿಯಾ ಟ್ರೈಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ. ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
Advertisement
ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. 2024ರ ಏಪ್ರಿಲ್ – ಈದ್ ಸಂದರ್ಭ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.