ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಸ್ಪರ್ಧಿಸುತ್ತಿದ್ದಾರೆ.
ವಿಜೇಂದರ್ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಪಕ್ಷ ಸೋಮವಾರ ಘೋಷಣೆ ಮಾಡಿದೆ. ಹೀಗಾಗಿ ಬಿಜೆಪಿಯ ರಮೇಶ್ ಬಿಧುರಿ ಹಾಗೂ ಆಮ್ ಆದ್ಮಿ ಪಕ್ಷದ ರಾಘವ್ ಚಂದ್ರ ವಿರುದ್ಧ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
Advertisement
ಈ ಬಗ್ಗೆ ವಿಜೇಂದರ್ ಕೂಡ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಪಕ್ಷ ಕೊಟ್ಟ ಅವಕಾಶ ಹಾಗೂ ಜವಾಬ್ದಾರಿಗಾಗಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
Advertisement
In more than 20 yrs of my career in boxing i have always made my country proud in the ring. Now its time to do something for my countrymen & serve them. I would like to accept this opportunity & thank @INCIndia party @RahulGandhi ji @priyankagandhi ji for this responsibility
— Vijender Singh (@boxervijender) April 22, 2019
Advertisement
ಟ್ವೀಟ್‍ನಲ್ಲೇನಿದೆ?
20 ವರ್ಷಗಳ ವೃತ್ತಿಪರ ಬಾಕ್ಸಿಂಗ್‍ನಲ್ಲಿ ಸದಾ ದೇಶ ಹೆಮ್ಮೆಪಡುವಂಥ ಸಾಧನೆ ಮಾಡಿದ್ದೇನೆ. ಇದೀಗ ದೇಶದ ಜನರಿಗಾಗಿ ಕೊಡುಗೆ ಹಾಗೂ ಸೇವೆ ಸಲ್ಲಿಸಲು ಒಳ್ಳೆಯ ಸಂದರ್ಭ ಒದಗಿಬಂದಿದೆ. ಒಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಹೊಸ ಜವಾಬ್ದಾರಿಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
Advertisement
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿಧುರಿ ಅವರು ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲುವು ತನ್ನದಾಗಿಸಿಕೊಂಡಿದ್ದರು. ದೆಹಲಿಯ 7 ಲೋಕಸಭಾ ಕ್ಷೇತ್ರಗಳಿಗೆ ಮೇ 12ರಂದು ಚುನಾವಣೆ ನಡೆಯಲಿದ್ದು, 23ಕ್ಕೆ ಫಲಿತಾಂಶ ಹೊರಬೀಳಲಿದೆ.