ಲಕ್ನೋ: ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಲಿಗಢ (Aligarh) ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು 14 ವರ್ಷದ ಮೋಹಿತ್ ಚೌಧರಿ ಎಂದು ಗುರುತಿಸಲಾಗಿದ್ದು, ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾ ಸ್ಪರ್ಧೆಗಾಗಿ ಓಟದ ಅಭ್ಯಾಸ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: Telangana| 7 ಮಂದಿ ಮಾವೋವಾದಿಗಳನ್ನು ಹೊಡೆದುರುಳಿಸಿದ ಪೊಲೀಸರು
ಅಧಿಕಾರಿಗಳ ಮಾಹಿತಿ ಪ್ರಕಾರ, ಡಿ.07 ರಂದು ಶಾಲೆಯಲ್ಲಿ ಕ್ರೀಡಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ಬಾಲಕ ತನ್ನ ಶಾಲಾ ಮೈದಾನದಲ್ಲಿ ಓಟದ ಅಭ್ಯಾಸ ಮಾಡುತ್ತಿದ್ದ. ಆರಂಭದಲ್ಲಿ ತನ್ನ ಸ್ನೇಹಿತರೊಂದಿಗೆ ಎರಡು ಸುತ್ತು ಓಡಿದ. ಹಾಗೆಯೇ ಮೂರನೇ ಸುತ್ತನ್ನು ಓಡುವಾಗ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನ ಸ್ನೇಹಿತರು ಅವರ ಪೋಷಕರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಿದ್ದು, ವೈದ್ಯರು ಅವನು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕಳೆದ 25 ದಿನಗಳಲ್ಲಿ ಅಲಿಗಢದಲ್ಲಿ ಕನಿಷ್ಠ ಮೂರು ಜನ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಅಲಿಘರ್‌ನ ಅರ್ರಾನಾ ಗ್ರಾಮದಲ್ಲಿ 20 ವರ್ಷದ ಮಮತಾ ಎಂಬುವವರು ಓಡುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಲೋಧಿ ನಗರದಲ್ಲಿ 8 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇನ್ನೂ ವೈದ್ಯರೊಬ್ಬರು ಆಫೀಸ್‌ಗೆ ಹೊರಡಲು ಸಿದ್ಧರಾಗುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನ.20 ರಂದು, ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಸ್‌ಎಂ ಅಫ್ಜಲ್ ಅವರ ಪುತ್ರ ಸೈಯದ್ ಬರ್ಕತ್ ಹೈದರ್ ಹೃದಯಾಘಾತದಿಂದ ನಿಧನರಾದರು.
ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow) 9 ವರ್ಷದ ವಿದ್ಯಾರ್ಥಿನಿ ಶಾಲೆಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಳು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.ಇದನ್ನೂ ಓದಿ: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್