ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ `ಗಣರಾಜ್ಯವನ್ನು ರಕ್ಷಿಸಿ’ ಎಂಬ ಘೋಷ ವಾಕ್ಯದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯಿಂದ ಈಚೆಗೆ ನಡೆದ ರ‍್ಯಾಲಿಯಲ್ಲಿ ಬಾಲಕನೊಬ್ಬ ಹಿಂದೂ ಹಾಗೂ ಕ್ರಿಶ್ಚಿಯನ್ನರ ವಿರುದ್ಧ ಘೋಷಣೆ ಕೂಗಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ.
ವೀಡಿಯೋನಲ್ಲಿ ವ್ಯಕ್ತಿಯೊಬ್ಬರ ಹೆಗಲ ಮೇಲೆ ಕುಳಿತಿರುವ ಹುಡುಗ, ಅಕ್ಕಿಯನ್ನು ಸಿದ್ಧವಾಗಿಡಿ, ಯಮ ನಿಮ್ಮ ಮನೆಗೆ ಬರ್ತಾನೆ, ನಾವು ಗೌರವಯುತವಾಗಿ ಬದುಕಿದರೆ ನಮ್ಮ ಜಾಗದಲ್ಲಿ ಬದುಕಬಹುದು. ಇಲ್ಲದಿದ್ದರೆ ಏನಾಗುತ್ತದೆ ಎನ್ನುವುದು ನಮಗೆ ಗೊತ್ತಿಲ್ಲ ಎಂದೂ ಘೋಷಣೆ ಕೂಗಿದ್ದಾನೆ. ಇದನ್ನೂ ಓದಿ: ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್
Advertisement
Advertisement
ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ, ಇಂತಹ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವುದು ಬಾಲಾಪರಾಧಿ ಕಾಯ್ದೆಯ ಅನ್ವಯ ಶಿಕ್ಷಾರ್ಹವಾಗಿದೆ. ನಾವು ಎಫ್‌ಐಆರ್ ದಾಖಲಿಸಲು ಸಂಬಂಧಿಸಿದ ಜಿಲ್ಲೆಯ ಅಧಿಕಾರಿಗಳಿಗೆ ಪತ್ರ ಬರೆಯುತ್ತೇವೆ. ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇವೆ ಎಂದಿದ್ದಾರೆ.
Advertisement
ಪಿಎಫ್‌ಐ ವಕ್ತಾರ ರೌಫ್ ಪಟ್ಟಾಂಬಿ ಸಹ ಈ ಬಗ್ಗೆ ಮಾತನಾಡಿದ್ದು, ಸಂಘಟನೆಯು ಆಯೋಜಿಸಿದ್ದ ಸಮಾವೇಶದಲ್ಲಿ ಘೋಷಣೆ ಕೂಗಿಲ್ಲ. ಅದಕ್ಕೂ ಮುನ್ನ ಸಾವಿರಾರು ಜನರು ಭಾಗವಹಿಸಿದ್ದ ರ‍್ಯಾಲಿಯಲ್ಲಿ ಘೋಷಣೆ ಕೂಗಿರಬಹುದು. ಆದರೆ ಹಿಂದೂಗಳ ವಿರುದ್ಧ ಘೋಷಣೆ ಕೂಗಿಲ್ಲ, ಹಿಂದುತ್ವ ವಿರೋಧಿ ಹಾಗೂ ಫ್ಯಾಸಿಸ್ಟ್ಗಳ ವಿರುದ್ಧ ಕೂಗಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಲವು ಐಫೋನ್‌ಗಳಲ್ಲಿ ಸ್ಥಗಿತವಾಗಲಿದೆ ವಾಟ್ಸಪ್
Advertisement
ರ‍್ಯಾಲಿಯಲ್ಲಿ ಅನೇಕರು ಹಿಂದುತ್ವ ಭಯೋತ್ಪಾದನೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಾಗೆಯೇ ಈ ಹುಡುಗನೂ ಘೋಷಣೆ ಕುಗಿದ್ದಾನೆ. ಹೊರತಾಗಿ ಹುಡುಗನ ಕೆಲ ಘೋಷಣೆಗಾಗಿ ನಾವು ವಿಷಾದಿಸುತ್ತೇವೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ. ಅಲಪ್ಪುಳ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.