Thursday, 16th August 2018

Recent News

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ!

ಹಾವೇರಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿರುವ ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನ 12 ವರ್ಷದ ಶರಣಪ್ಪ ಕಳಸಣ್ಣವರ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದನು. ಆಟವಾಡಲು ಹೋಗಿ ಮನೆಗೆ ಬಾರದೇ ನಾಪತ್ತೆಯಾಗಿದ್ದನು.

ಪೋಷಕರು ತುಂಬಾ ಸಮಯವಾದರೂ ಮನೆಗೆ ಬರಲಿಲ್ಲ ಎಂದು ಸಂಬಂಧಿಕರು, ಸ್ನೇಹಿತರು ಮತ್ತು ಗ್ರಾಮದ ಸುತ್ತಾಮುತ್ತ ಹುಡುಕಾಡಿದ್ದಾರೆ. ಕೊನೆ ಎಲ್ಲೂ ಪತ್ತೆಯಾದ ಹಿನ್ನೆಲೆಯಲ್ಲಿ ಹಾವೇರಿ ಗ್ರಾಮೀಣ ಠಾಣೆಯ ನಾಪತ್ತೆ ಹಾಗೂ ಕಿಡ್ನಾಪ್ ಕೇಸ್ ದಾಖಲು ಮಾಡಿದ್ದರು. ಆದರೆ ಇಂದು ಬೆಳಗ್ಗೆ ಗ್ರಾಮದ ಕೆರೆಯಲ್ಲಿ ಬಾಲಕ ಶರಣಪ್ಪನ ಮೃತದೇಹ ಪತ್ತೆಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *