ಮಂಗಳೂರು: ಹೊಟ್ಟೆ ನೋವಿನ (Stoamch Pain) ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ ಹುಡುಗ ಸಾವನ್ನಪ್ಪಿದ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ನಡೆದಿದೆ.
ಮೃತ ದುರ್ದೈವಿಯನ್ನು ಸೃಜಿತ್(17) ಎಂದು ಗುರುತಿಸಲಾಗಿದ್ದು, ಈತ ಸುಳ್ಯದ (Sullia) ಪೈಚಾರ್ ಶಾಂತಿನಗರ ನಿವಾಸಿ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸೃಜಿತ್‍ನನ್ನು ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ (Chethana Hospital Puttur) ದಾಖಲಿಸಲಾಗಿತ್ತು. ಅಂತೆಯೇ ಖ್ಯಾತ ವೈದ್ಯ ಸೃಜಿತ್‍ಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆದರೆ ಅಂದು ರಾತ್ರಿ ವೇಳೆ ಆರೋಗ್ಯ ಸ್ಥಿತಿ ಗಂಭೀರವಿದೆ. ಹೀಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ.
ಇದೀಗ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿಯಿಂದ ಸೃಜಿತ್ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಚೇತನಾ ಆಸ್ಪತ್ರೆಯ ವೈದ್ಯರು ವೆಂಟಿಲೇಟರ್ ವ್ಯವಸ್ಥೆ ಇಲ್ಲದೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿ ಸೃಜಿತ್ ಶವವನ್ನ ಆಸ್ಪತ್ರೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಶಸ್ತ್ರಚಿಕಿತ್ಸೆ ಮಾಡಿ ಲೋಪವೆಸಗಿದ ಖ್ಯಾತ ವೈದ್ಯರನ್ನ ಬಂಧಿಸಲು ಪಟ್ಟು ಹಿಡಿದರು. ಮೃತನ ಮನೆಯವರಿಗೆ ಪರಿಹಾರ ನೀಡುವಂತೆಯೂ ಒತ್ತಾಯಿಸಲಾಯಿತು.
ಮೂರು ದಿನಗಳ ಒಳಗೆ ಲೋಪವೆಸಗಿದ ವೈದ್ಯರನ್ನ ಬಂಧಿಸಬೇಕು. ಇಲ್ಲದಿದ್ದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ಸಂಬಂಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]