ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳ ದಾಳಿಗೆ ತುತ್ತಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಪ್ರವೀಣ್ (13) ಮೃತ ದುರ್ದೈವಿ. ನಾಯಿಗಳ ದಾಳಿಗೆ ಸಿಕ್ಕ ಬಾಲಕ ಪ್ರವೀಣ್ ಸ್ಥಿತಿ ಚಿಂತಾಜನಕದಲ್ಲಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬಾಲಕ ಮೃತಪಟ್ಟಿದ್ದಾನೆ.
Advertisement
ಪ್ರವೀಣ್ ಮುರಗಮ್ಮ ಹಾಗೂ ಮನೋಜ್ ದಂಪತಿಯ ಮಗನಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲೇ ಪ್ರವೀಣ್ ಪೋಷಕರು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಚಿಕಿತ್ಸೆಗೆ ಹಣವಿಲ್ಲದಿದ್ದಾಗ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದರು. ಆಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪ್ರವೀಣ್ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಮೇಯರ್ ಸಂಪತ್ ರಾಜ್ ಅವರು ತಿಳಿಸಿದ್ದರು. ಈ ಘಟನೆ ಹೆಚ್‍ಎಎಲ್‍ನ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರಂ ಬಳಿ ನಡೆದಿತ್ತು.
Advertisement
Advertisement
ಬುಧವಾರ ಪ್ರವೀಣ್ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದನು. ಈ ವೇಳೆ ಬಾಲಕನ ಮೇಲೆ ಸುಮಾರು 10 ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದ್ದು, ಪ್ರವೀಣ್ ನ ಕತ್ತು, ಮೈ ಹಾಗೂ ಕೈ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಇದನ್ನು ಕಂಡ ಸ್ಥಳೀಯರು ನಾಯಿಗಳನ್ನು ಓಡಿಸಿ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬಾಲಕನ ಸ್ಥಿತಿಯು ಚಿಂತಾಜನಕವಾಗಿತ್ತು. ಆಗ ವೈದ್ಯರು ಇನ್ನು ಮೂರು ದಿನಗಳ ಕಾಲ ಏನು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದರು.
Advertisement
ಈ ಘಟನೆ ನಡೆದ ಬಳಿಕ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಏರಿಯಾಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದೆ. ಇವುಗಳಿಗೆ ಮೂಲ ಕಾರಣ ವಿಭೂತಿಪುರಂನಲ್ಲಿರುವ ಹೆಚ್ಚಿನ ಮಾಂಸದ ಅಂಗಡಿಗಳು. ಅಂಗಡಿಯವರು ನಾಯಿಗಳಿಗೆ ಮಾಂಸದ ತುಂಡುಗಳನ್ನು ಹಾಕುತ್ತಾರೆ. ಹೀಗಾಗಿ ಇವನ್ನೇ ರೂಢಿ ಮಾಡಿಕೊಂಡಿರುವ ನಾಯಿಗಳು ಜನರ ಮೇಲೂ ದಾಳಿ ನಡೆಸುತ್ತಲೇ ಇರುತ್ತವೆ. ಈ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv