ಧಾರವಾಡ: ಜಿಲ್ಲೆಯ ನವಲಗುಂದ (Navalagunda) ಪಟ್ಟಣದ ಖಾಸಗಿ ಶಾಲೆಯಲ್ಲಿ ಬಾಲಕನೋರ್ವ ಎರಡನೇ ಮಹಡಿಯಿಂದ ಬಿದ್ದು ಬಾಲಕ ಮೃತಪಟ್ಟ ಘಟನೆ ನಡೆದಿದೆ.
ಆಕಾಶ್ ನೀಲಣ್ಣವರ್ ಮೃತ ಬಾಲಕ. ನವಲಗುಂದ ಪಟ್ಟಣದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಎಂದು ಗುರುಸಲಾಗಿದೆ. ಇದನ್ನೂ ಓದಿ: ಜೂ.25ಕ್ಕೆ ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ: ರಾಮಲಿಂಗಾರೆಡ್ಡಿ
ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಮಗನಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಪೋಷಕರು ಖಾಸಗಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆಗೆ ಸೇರಿಸಿದ ಎಂಟೇ ದಿನಗಳಲ್ಲಿ ಬಾಲಕ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲಾ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಾಲೆ ಆಡಳಿತ ಮಂಡಳಿ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಅಲ್ಲದೇ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಬಾಲಕ ಕಟ್ಟಡದ ಮೇಲಿಂದ ಬಿದ್ದಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ಹೆಚ್‌ಡಿಕೆಗೆ 18 ಶಾಸಕರನ್ನು ವಿಶ್ವಾಸದಲ್ಲಿ ಇಟ್ಟುಕೊಳ್ಳೋಕೆ ಆಗ್ಲಿಲ್ಲ – ಮಾಗಡಿ ಬಾಲಕೃಷ್ಣ ಟಾಂಗ್
