ಚಿಕ್ಕೋಡಿ: ಮೊಬೈಲ್ ಟವರ್(Mobile Tower) ಬಳಿ ಆಟ ಆಡುವಾಗ ವಿದ್ಯುತ್(Electricity) ತಗುಲಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಂಕರಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ(Belagavi) ಜಿಲ್ಲೆಯ ಅಥಣಿ ತಾಲೂಕಿನ ಶಂಕರಟ್ಟಿ ಗ್ರಾಮದ ಮಲ್ಲಿಕಾರ್ಜುನ್ ಮುಗಳಖೊಡ (13) ಮೃತ ದುರ್ದೈವಿ ಬಾಲಕ. ಮಲ್ಲಿಕಾರ್ಜುನ್ ಗ್ರಾಮದ ಹೊರವಲಯದಲ್ಲಿ ಆಟ ಆಡುವ ಸಂದರ್ಭದಲ್ಲಿ ಮೊಬೈಲ್ ಟವರ್ ಬಳಿ ಹೋಗಿದ್ದಾನೆ. ಆ ವೇಳೆ ಬಾಲಕನಿಗೆ ವಿದ್ಯುತ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ: ಅಶೋಕ್
- Advertisement3
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಾರ್ಮಾಡಿ ಘಾಟಿಯ ರಸ್ತೆ ಬದಿ ಮಣ್ಣು ಕುಸಿತ – ಘನ ವಾಹನ ಸಂಚಾರ ನಿಷೇಧ ಹೇರಲು ಆಗ್ರಹ