ಬೆಂಗಳೂರು: ಗೇಟ್ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತಾತ್ರೇಯ ವಾರ್ಡ್‌ನ (Dattatreya Ward) ಸಹಾಯಕ ಎಂಜಿನಿಯರ್ ಟಿ .ಶ್ರೀನಿವಾಸ ರಾಜು ಅವರನ್ನು ಅಮಾನತುಗೊಳಿಸಲಾಗಿದೆ.
ಪಾಲಿಕೆ ಉಪಯುಕ್ತ ಅಡಳಿತ ವಿಭಾಗ ತಕ್ಷಣವೇ ಜಾರಿಗೆ ಬರುವಂತೆ ಅದೇಶ ಹೊರಡಿಸಿದೆ. ಕರ್ತವ್ಯ ನಿರ್ಲಕ್ಷ್ಯ, ಗೇಟ್ ಸಾಮರ್ಥ್ಯಕ್ಕೆ ತಕ್ಕಂತೆ ಕೀಲುಗಳನ್ನು ಅಳವಡಿಸಿಲ್ಲ, ಸರಿಯಾದ ಸಮಯಕ್ಕೆ ನಿರ್ವಹಣೆ ಮಾಡದ್ದಕ್ಕೆ ಬಿಬಿಎಂಪಿ (BBMP) ಅಡಳಿತ ವಿಭಾಗದ ಉಪ ಅಯುಕ್ತರು ಅಮಾನತು ಮಾಡಿ ಅದೇಶ ಪ್ರಕಟಿಸಿದ್ದಾರೆ.
ಘಟನೆ ಬಗ್ಗೆ ಮೂರು ದಿನಗಳಲ್ಲಿ ವಿವರಣೆ ನೀಡುವಂತೆ ಕಾರ್ಯಪಾಲಕ ಇಂಜಿನಿಯರ್ ವೆಂಕಟೇಶ್ ಅವರಿಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್
ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ಸಾವಿಗೀಡಾದ ಘಟನೆ ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್‌ನಲ್ಲಿ ಭಾನುವಾರ ನಡೆದಿತ್ತು. ಘಟನೆಯಲ್ಲಿ ನಿರಂಜನ್ (10) ಮೃತಪಟ್ಟಿದ್ದ. ಆಟ ಆಡಲು ನಿರಂಜನ್ ಮೈದಾನಕ್ಕೆ ಬಂದಿದ್ದ. ಈ ವೇಳೆ ಬಾಲಕ ಗೇಟ್ (Gate) ಬಳಿಯೇ ನಿಂತಿದ್ದ. ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿತ್ತು. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿ ಮೃತಪಟ್ಟಿದ್ದ.