– ಚಿಕಿತ್ಸಾ ವೆಚ್ಚಕ್ಕೆ ಸಹಾಯ ಕೋರಿದ ಪೋಷಕರು
ಬೆಂಗಳೂರು: ಆಟ ಆಡುತ್ತಿದ್ದಾಗ 6 ವರ್ಷದ ಬಾಲಕನೋರ್ವ ಮೂರನೇ ಮಹಡಿಯಿಂದ ಬಿದ್ದಿರುವ ಘಟನೆ ಸುಂಕದಕಟ್ಟೆಯ ಅಯ್ಯಪ್ಪ ಸರ್ಕಲ್ ಬಳಿ ನಡೆದಿದೆ.
ಗೌರಿ ಹಬ್ಬದ ದಿನ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 6 ವರ್ಷದ ಬಾಲಕ ವಿನೀಶ್ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸದ್ಯಕ್ಕೆ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸಾ ವೆಚ್ಚಕ್ಕೆ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ. ಘಟನೆ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

