ಬೀಜಿಂಗ್: ಬಾಲಕನೊಬ್ಬ ಅಮ್ಮನ ಹೊಡೆತವನ್ನು ತಪ್ಪಿಸಿಕೊಳ್ಳುವ ಸಲುವಾಗಿ ಕಟ್ಟಡದ 5ನೇ ಮಹಡಿಯಿಂದ ಹಾರಿದ ಘಟನೆ ಚೀನಾದಲ್ಲಿ (China Boy Jumping) ನಡೆದಿದೆ.
ಈ ಘಟನೆ ಪೂರ್ವ ಚೀನಾದ ಅನ್ಹುಯಿ ಪ್ರಾಂತ್ಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಬಾಲಕನನ್ನು ಯಾನ್ (6) ಎಂದು ಗುರುತಿಸಲಾಗಿದೆ. ಈತನ ತಂದೆ ಇನನೊಂದು ನಗರದಲ್ಲಿ ಉದ್ಯೋಗದಲ್ಲಿದ್ದು, ಹೀಗಾಗಿ ಯಾನ್ ತನ್ನ ತಾಯಿ ಜೊತೆ ವಾಸವಾಗಿದ್ದಾನೆ.
ಘಟನೆಯ ವೀಡಿಯೋವನ್ನು ನರೆಮನೆಯ ವ್ಯಕ್ತಿ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದೆ. ವೀಡಿಯೋ ರೆಕಾರ್ಡ್ ಮಾಡುತ್ತಿರುವ ವ್ಯಕ್ತಿ ಮತ್ತು ನೆರೆಹೊರೆಯ ಇತರ ಜನರು ಬಾಲಕನನ್ನು ಹೊಡೆಯಬೇಡಿ ಎಂದು ಪರಿಪರಿಯಾಗಿ ಮನವಿ ಮಾಡಿದರೂ ಆಕೆ ಕೇಳಲಿಲ್ಲ. ಪರಿಣಾಮ ಬಾಲಕ ನೋವು ತಡೆದುಕೊಳ್ಳಲು ಸಾಧ್ಯವಾಗದೇ ಏಕಾಏಕಿ ಕಟ್ಟಡದಿಂದ ಜಿಗಿದಿದ್ದಾನೆ. ಇದನ್ನೂ ಓದಿ: ಅಕ್ರಮ ಸಂಬಂಧ ಇಟ್ಟುಕೊಂಡು ಚಿತ್ರಹಿಂಸೆ ಕೊಟ್ಟ: ಪವಿತ್ರಾ ಬರೆದ ಡೆತ್‍ನೋಟ್‍ನಲ್ಲೇನಿದೆ?
ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಾಲಕನ ದೇಹದ ಮೂಳೆಗಳು ಮುರಿದಿದ್ದು, ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಬಾಲಕನ ವೀಡಿಯೋಗೆ ಸಾಕಷ್ಟು ಕಾಮೆಂಟ್ ಗಳು ಬರುತ್ತಿದ್ದು, ತಾಯಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
Web Stories