ಮಂಗಳೂರು: ಮನೆಯಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕನೊಬ್ಬ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ದಿಡುಪೆಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಶ್ರೀಷಾ(14) ಎಂದು ಗುರುತಿಸಲಾಗಿದ್ದು, ಈತ 8 ನೇ ತರಗತಿಯಲ್ಲಿ ಓದುತ್ತಿದ್ದನು. ಭಾನುವಾರ ರಜೆ ಇದ್ದಿದ್ದರಿಂದ ಬಾಲಕ ಮನೆ ಅಂಗಳದಲ್ಲಿ ಸೀರೆಯಲ್ಲಿ ಮಾಡಿದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದನು. ಇದನ್ನೂ ಓದಿ: ಕೊಪ್ಪಳದಲ್ಲಿ ಪೋಲಿ ಹುಡುಗರ ಹಾವಳಿ- ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿ ಅಶ್ಲೀಲ ಬರಹ
ಹೀಗೆ ಆಟವಾಡುತ್ತಿದ್ದಾಗ ಸೀರೆ ಆಕಸ್ಮಿಕವಾಗಿ ಶ್ರೀಷಾ ಕುತ್ತಿಗೆಗೆ ಬಿಗಿದಿದೆ. ಪರಿಣಾಮ ಆತ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಪೋಷಕರು ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕನ ಶವದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]