– ಚಿಕಿತ್ಸೆ ಫಲಕಾರಿಯಾಗದೇ ಸಾವು
ರಾಮನಗರ: ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಒಂದನೆಯ ತರಗತಿ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಹರ್ಷ(6) ಮೃತಪಟ್ಟ ಬಾಲಕ. ನಾಯಕನಹಳ್ಳಿ ಗ್ರಾಮದ ಕಂಬಯ್ಯ ಎಂಬವರ ಪುತ್ರನಾಗಿದ್ದ ಹರ್ಷ ವೀರೇಗೌಡನದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿದ್ದನು. ಜನವರಿ 26ರಂದು ಶಾಲೆ ಮುಗಿಸಿ ಮನೆಗೆ ಹೋಗುವಾಗ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ.
Advertisement
Advertisement
ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮ ನಿಮಿತ್ತ ಶಾಲೆಗೆ ತೆರಳಿದ್ದ ಹರ್ಷ ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ತೆರಳುತ್ತಿದ್ದನು. ಈ ವೇಳೆ ರಸ್ತೆ ದಾಟಿ ಮನೆಯತ್ತ ಹೆಜ್ಜೆ ಇಡಲು ಮುಂದಾಗಿದ್ದ ಹರ್ಷಗೆ ರಾಮನಗರ ಕಡೆಯಿಂದ ಮಾಗಡಿ ಕಡೆಗೆ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
Advertisement
ಈ ಅಪಘಾತದಲ್ಲಿ ಹರ್ಷ ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣ ಹರ್ಷನನ್ನು ಸ್ಥಳೀಯ ಮಾಗಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಹರ್ಷ ಸಾವನ್ನಪ್ಪಿದ್ದಾನೆ.
Advertisement
ಈ ಘಟನೆ ಸಂಬಂಧ ಬಾಲಕ ಹರ್ಷನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.