ಜೈಪುರ: ಬೇರೊಬ್ಬ ವ್ಯಕ್ತಿಯೊಂದಿಗೆ ಗರ್ಲ್‌ಫ್ರೆಂಡ್ (Girlfriend) ಮದುವೆಯಾಗಿದ್ದಕ್ಕೆ (Marriage) ಬಾಲಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ (Rajastan) ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.
ಯಶ್ ವ್ಯಾಸ್ (17) ಆತ್ಮಹತ್ಯೆಗೆ ಶರಣಾದ ಬಾಲಕ. ಯಶ್ ವ್ಯಾಸ್ ಹಾಗೂ ಆತನ ಗೆಳತಿ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಹುಡುಗಿಯು ಬೇರೆ ವ್ಯಕ್ತಿಯನ್ನು ಮದುವೆ ಆಗಿದ್ದಾಳೆ. ಇದರಿಂದ ಮನನೊಂದ ಯಶ್ ವ್ಯಾಸ್ ತನ್ನ ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದ.
ಅದಾದ ಬಳಿಕ ಮಹಾತ್ಮಗಾಂಧಿ ಆಸ್ಪತ್ರೆಯ (Hospital) ಆವರಣದಲ್ಲಿ ಯಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ನೋಡಿದ ಜನರು ಆತನನ್ನು ಕೂಡಲೇ ಆಸ್ಪತ್ರೆಯೊಳಗೆ ಕರೆದೊಯ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಉದಯಪುರಕ್ಕೆ ಚಿಕಿತ್ಸೆಗಾಗಿ ಕಳುಹಿಸಲಾಗಿತ್ತು. ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷರ ಎದುರೇ ಕಾರ್ಯಕರ್ತರ ಕಿತ್ತಾಟ
ಆದರೆ ಚಿಕಿತ್ಸೆ ಫಲಕಾರಿಯಾಗದೇ ಯಶ್ ಸಾವನ್ನಪ್ಪಿದ್ದಾನೆ. ಘಟನೆಯ ವೀಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ಟ್ಟಿಟ್ಟರ್‌ನಿಂದ 150 ಕೋಟಿ ಅಕೌಂಟ್‌ಗಳು ಡಿಲೀಟ್ – ಎಲೋನ್ ಮಸ್ಕ್