CrimeLatestMain PostNational

ಮಗಳನ್ನು ಪ್ರೀತಿಸಿದ್ದಕ್ಕೆ ಯುವಕನ ಹತ್ಯೆಗೈದ ತಂದೆ

Advertisements

ಪಾಟ್ನಾ: ಯುವಕನೋರ್ವನನ್ನು ಪ್ರೇಯಸಿಯ ತಂದೆ ಹಾಗೂ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಖುಷ್ಕಿಬಾಗ್ ಬಾಗೇಶ್ವರ ಕಾಲೋನಿ ನಿವಾಸಿ ಕುನಾಲ್ ಎಂದು ಗುರುತಿಸಲಾಗಿದೆ. ಯುವಕ ತನ್ನ ಮನೆಗೆ ಬೈಕ್‍ನಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಗೆ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಆತನ ತೊಡೆಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಯುವಕ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಗುಂಡಿನ ಶಬ್ಧ ಕೇಳಿ ಸ್ಥಳಕ್ಕಾಗಮಿಸಿದ ಸ್ಥಳೀಯರು ಕುನಾಲ್ ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: 8 ವರ್ಷಗಳಿಂದ ಲಿವಿಂಗ್ ರಿಲೇಷನ್, 14 ಬಾರಿ ಗರ್ಭಪಾತ – ಮಹಿಳೆ ಆತ್ಮಹತ್ಯೆ, ಟೆಕ್ಕಿ ವಿರುದ್ಧ FIR

ನಂತರ ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ಯುವಕನ ಹೇಳಿಕೆ ಪಡೆದುಕೊಂಡಿದ್ದಾರೆ. ಈ ವೇಳೆ ಆರೋಪಿಗಳಲ್ಲಿ ಒಬ್ಬರು ತನ್ನ ಗೆಳತಿಯ ತಂದೆ ಮುನ್ನಾ ಪಾಸ್ವಾನ್ ಆಗಿದ್ದು, ಬೈಕ್‍ನಲ್ಲಿದ್ದ ಇನ್ನೊಬ್ಬ ವ್ಯಕ್ತಿಯನ್ನು ಗುರುತಿಸಲಾಗಲಿಲ್ಲ. 2021ರ ಜನವರಿಯಲ್ಲಿ ನನ್ನ ವಿರುದ್ಧ ಮುನ್ನಾ ಪಾಸ್ವಾನ್ ಅವರು ತಮ್ಮ ಮಗಳನ್ನು ಅಪಹರಿಸಿದ್ದಾನೆ ಎಂದು ದೂರು ದಾಖಲಿಸಿ, ಜೈಲಿಗೆ ಕಳುಹಿಸಿದ್ದರು. ಆದರೆ 20 ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಬಂದೆ. ಅಂದಿನಿಂದಲೂ ಯುವತಿಯ ತಂದೆ ನನಗೆ ಪದೇ, ಪದೇ ಜೀವ ಬೆದರಿಕೆಯೊಡ್ಡುತ್ತಿದ್ದರು ಎಂದು ಕುನಾಲ್ ತಿಳಿಸಿದ್ದಾರೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಗುಜರಾತಿನ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮೋದಿ ತವರಲ್ಲಿ ಮಳೆಯ ಸಂಕಷ್ಟಕ್ಕೆ ಸಿಲುಕಿದ ಜನ

Live Tv

Leave a Reply

Your email address will not be published.

Back to top button