ಬೆಂಗಳೂರು: ನಗರದ (Bengaluru) ಅಂಜನಾಪುರದಲ್ಲಿ ಡೆಂಗ್ಯೂವಿನಿಂದ (Dengue) 11 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ಗಗನ್ (11) ಎಂದು ಗುರುತಿಸಲಾಗಿದೆ. ಬಾಲಕನಿಗೆ ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತಪಾಸಣೆ ನಡೆಸಿದ್ದ ವೇಳೆ ಡೆಂಗ್ಯೂ ಇರುವುದು ಪತ್ತೆಯಾಗಿತ್ತು. ಬಳಿಕ ಆತನಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ತಡರಾತ್ರಿ ಬಾಲಕ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಬಾಲಕ ಜಂಬೂಸವಾರಿ ದಿಣ್ಣೆಯ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದೀಗ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ನಗರದ ಜನರಿಗೆ ಡೆಂಗ್ಯೂ ಬಗ್ಗೆ ಮಾಹಿತಿ ನೀಡುತ್ತಿದ್ದು, ಸ್ವಚ್ಚತೆ ಹಾಗೂ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ತಿಳಿಸಿದೆ. ಇದನ್ನೂ ಓದಿ: ಸಿಎಂ ಎದುರೇ ಆಪ್ತ ಮಹದೇವಪ್ಪಗೆ ಕೈ ಶಾಸಕ ಕ್ಲಾಸ್!