ಈ ಹಿಂದೆ ನಿಶ್ಚಾತಾರ್ಥ ಮುರಿದು ಬಿದ್ದ ಕಾರಣದಿಂದಾಗಿ ಮದುವೆಯನ್ನೇ (Wedding) ಮರೆತಿದ್ದ ಪೂಜಾ ಗಾಂಧಿ (Pooja Gandhi), ಇದೀಗ ಎಲ್ಲ ಕಹಿ ಘಟನೆಗಳನ್ನು ಮರೆತು ಮತ್ತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಿಂದಲೂ ದೂರವಿರುವ ಪೂಜಾ, ಕನ್ನಡ ಕಲಿಕೆಯ ಕಾರಣದಿಂದಾಗಿ ಸಖತ್ ಸುದ್ದಿಯಾಗಿದ್ದರು. ಇದೀಗ ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಗೆ ಬಂದಿದ್ದಾರೆ.
Advertisement
ಮಳೆ ಹುಡುಗಿ ಎಂದೇ ಖ್ಯಾತಿಯ ಆಗಿರುವ ಪೂಜಾ ಗಾಂಧಿ ನಾಳೆ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಮಂತ್ರ ಮಾಂಗಲ್ಯ (Mantra Mangalya)ಮಾದರಿಯಲ್ಲಿ ಮದುವೆ ಆಗುತ್ತಿದ್ದಾರೆ ಎನ್ನಲಾಗಿತ್ತು. ಅದೀಗ ಎಲ್ಲವೂ ನಿಜವಾಗಿದೆ. ಸ್ವತಃ ಪೂಜಾ ಗಾಂಧಿಯವರೆ ಮಾಧ್ಯಮಗಳಿಗೆ ತಮ್ಮ ಮದುವೆ ಕುರಿತಾಗಿ ಪತ್ರ ಬರೆದಿದ್ದಾರೆ.
Advertisement
Advertisement
ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.
Advertisement
ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.