ಪಠಾಣ್ ಸಿನಿಮಾ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡ ಪರಿ ಹಲವರ ಕೆಂಗಣ್ಣಿಗೆ ಕಾರಣವಾಗಿದೆ. ಕೇಸರಿ ಬಿಕಿನಿಯಲ್ಲಿ ದೀಪಿಕಾ ಕುಣಿದಿದ್ದಾರೆ ಎನ್ನುವುದು ಮತ್ತು ಅದು ಶಾರುಖ್ ಖಾನ್ ನಟನೆಯ ಚಿತ್ರ ಎನ್ನುವ ಕಾರಣಕ್ಕಾಗಿ ವಿವಾದ ಎದ್ದಿದೆ. ಇದರ ಬೆನ್ನಲ್ಲೆ ಪಠಾಣ್ ಸಿನಿಮಾವನ್ನು ಬೈಕಾಟ್ ಮಾಡಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಹಲವರು ಒತ್ತಾಯ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ದೀಪಿಕಾರ ಹಳೆ ಫೋಟೋವೊಂದನ್ನು ವೈರಲ್ ಮಾಡುತ್ತಿದ್ದು ಅದನ್ನೂ ಸೇರಿಸಿ ಸಿನಿಮಾ ಬೈಕಾಟ್ ಮಾಡಿ ಎಂದು ಹೇಳಲಾಗುತ್ತಿದೆ.
Advertisement
ಈ ಹಿಂದೆ 2020ರಲ್ಲಿ ಜೆಎನ್ ಯೂ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದರು. ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದರು. ತುಕ್ಡೆ ಗ್ಯಾಂಗ್ ಜೊತೆ ದೀಪಿಕಾ ಸೇರಿದ್ದಾರೆ ಎಂದು ಕಾರಣವನ್ನಿಟ್ಟುಕೊಂಡು ಪ್ರತಿಭಟನೆ ಮಾಡಲಾಯಿತು. ಆ ಫೋಟೋವನ್ನು ಪಠಾಣ್ ಜೊತೆ ಸೇರಿಸಿ ಈ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಹೊಸ ಹೋರಾಟ ಶುರು ಮಾಡಿದ್ದಾರೆ.
Advertisement
Advertisement
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಹಾಡು ಮೂರು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿದೆ. ಈ ಹಾಡನ್ನು ಇಪ್ಪತ್ತು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಆದರೆ, ಈ ಹಾಡಿನಲ್ಲಿ ದೀಪಿಕಾ ಹಾಕಿರುವ ಡ್ರೆಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇಸರಿಯ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಈ ಹಾಡಿನ ಸಾಲಿಗೆ ಹಾಕಿರುವ ಡ್ರೆಸ್ ಗೂ ಹೊಂದಾಣಿಕೆ ಮಾಡಿಕೊಂಡು ನೆಟ್ಟಿಗರು ಗರಂ ಆಗಿದ್ದಾರೆ. ಈ ಕಾರಣದಿಂದಾಗಿ ಚಿತ್ರಕ್ಕೆ ಬಹಿಷ್ಕಾರ ಹಾಕುವಂತೆ ಸೋಷಿಯಲ್ ಮೀಡಿಯಾದಲ್ಲಿ ಕರೆ ನೀಡುತ್ತಿದ್ದಾರೆ.
Advertisement
ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟಿದ್ದಾರೆ. ‘ಬೇಷರಂ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಅಂತಾನೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಹೀಗಾಗಿ ಬೈಕಾಟ್ ಪಠಾಣ್ ಟ್ರೆಂಡ್ ಹೆಚ್ಚಿದೆ. ಇದನ್ನೂ ಓದಿ: ದೀಪಿಕಾ ದಾಸ್ ವರ್ತನೆಗೆ ಕಿಡಿಕಾರಿದ ರೂಪೇಶ್ ರಾಜಣ್ಣ
ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ. ಶಾರುಖ್ ಈ ಸಿನಿಮಾದಲ್ಲಿ ಮತ್ತೆ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿದ್ದಾರೆ.