BollywoodCinemaLatestMain Post

ಬಾಲಿವುಡ್ ನಲ್ಲಿ ಶುರುವಾಗಿದೆ ಬೈಕಾಟ್ ಆಂದೋಲನ : ಕಂಗನಾ ಟಾರ್ಗೆಟ್

Advertisements

ಬಿಟೌನ್ ನಲ್ಲಿ ಎರಡು ಮೆಗಾ ಬಜೆಟ್ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಮುಂದಿನ ವಾರ ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ರಿಲೀಸ್ ಆಗುತ್ತಿದ್ದರೆ, ಇದರ ಬೆನ್ನಿಂದೆಯೇ ಅಕ್ಷಯ್ ಕುಮಾರ್ ಮುಖ್ಯ ಭೂಮಿಕೆಯ ರಕ್ಷಾ ಬಂಧನ್ ತೆರೆಗೆ ಬರಲು ಸಿದ್ಧತೆ ನಡೆಸಿದೆ. ಈ ಎರಡೂ ಚಿತ್ರಗಳಿಗೂ ಬೈಕಾಟ್ ಬೇನೆ ಶುರುವಾಗಿದೆ. ಸೋಷಿಯಲ್ ಮೀಡಿಯಾದಲ್ಲಂತೂ ಟ್ರೆಂಡ್ ಕ್ರಿಯೇಟ್ ಆಗಿದೆ.

ಆಮೀರ್ ಖಾನ್ ಎರಡ್ಮೂರು ವರ್ಷಗಳ ಹಿಂದೆ ದೇಶದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮತ್ತು ಪಿಕೆ ಸಿನಿಮಾದಲ್ಲಿ ಹಿಂದೂ ದೇವರಿಗೆ ಅಗೌರವ ತೋರಿದ್ದಾರೆ ಎನ್ನುವ ಕಾರಣಕ್ಕಾಗಿ ಲಾಲ್ ಸಿಂಗ್ ಚಡ್ಡಾವನ್ನು ಹಿಂದೂಗಳು ನೋಡಬಾರದು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಅದಕ್ಕೆ ಧ್ವನಿಗೂಡಿಸಿದ್ದಾರೆ. ಈ ಕುರಿತು ಸ್ವತಃ ಆಮೀರ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಭಾರತವನ್ನು ಪ್ರೀತಿಸುವಂತವನು ಎಂದು ಹೇಳುವ ಮೂಲಕ ಸಮಾಧಾನಿಸಿದ್ದಾರೆ. ಇದನ್ನೂ ಓದಿ:ಪತಿ ಪಾದದ ಬಳಿ ಕೂತು ಪೂಜಿಸಿದಕ್ಕೆ ಟ್ರೋಲ್ ಆದ ನಟಿ ಪ್ರಣಿತಾ

ಇತ್ತ ದೇಶಪರ, ದೇಶಭಕ್ತಿ ಸಾರುವಂತಹ ಅನೇಕ ಚಿತ್ರಗಳನ್ನು ಮಾಡಿರುವ ಅಕ್ಷಯ್ ಕುಮಾರ್ ನಟನೆಯ ರಕ್ಷಾ ಬಂಧನಕ್ಕೆ ಕಥೆ ಬರೆದವರು ಕೂಡ ಹಿಂದೂಗಳಿಗೆ ಅವಹೇಳನ ಮಾಡುವಂತಹ ಟ್ವಿಟ್ ಗಳನ್ನು ಮಾಡಿದ್ದರು ಎನ್ನುವ ಕಾರಣಕ್ಕಾಗಿ ಈ ಸಿನಿಮಾವನ್ನೂ ಬೈಕಾಟ್ ಮಾಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಇದಕ್ಕೆ ಕಂಗನಾ ರಣಾವತ್ ಕೂಡ ಧ್ವನಿ ಎತ್ತಬೇಕು ಎಂದು ಒತ್ತಡ ಹೇರಿದ್ದಾರೆ. ಇದಕ್ಕೂ ಉತ್ತರ ನೀಡಿದ ಕಂಗನಾ, ದೇಶ ಮತ್ತು ಹಿಂದೂಗಳ ಪರ ಯಾರೇ ಅಗೌರವ ತೋರಿದರೂ, ಅಂತಹ ಸಿನಿಮಾಗಳನ್ನು ಒಪ್ಪಬೇಡಿ ಎಂದು ಟ್ವಿಟ್ ಮಾಡಿದ್ದಾರೆ.

Live Tv

Leave a Reply

Your email address will not be published.

Back to top button