– ಬಳಿಕ 3ನೇ ಮಹಡಿಯಿಂದ ಆತ್ಮಹತ್ಯೆಗೆ ಯತ್ನ
– ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ
ಭೋಪಾಲ್: ಬ್ರೇಕಪ್ ಮಾಡಿಕೊಂಡಿದ್ದಕ್ಕೆ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ಚಾಕು ಇರಿದು ಹಲ್ಲೆ ಮಾಡಿ ಸ್ವತಃ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ಬುರ್ಹಾನಪುರದಲ್ಲಿ ನಡೆದಿದೆ.
ಯುವಕ ತನ್ನ ಪ್ರೇಯಸಿಗೆ ಚಾಕು ಇರಿದ ತಕ್ಷಣ ಮೂರನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈ ಘಟನೆಯಿಂದ ಯುವಕ ಹಾಗೂ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಸುದ್ದಿ ಸಂಸ್ಥೆ ಪ್ರಕಾರ, ಈ ಘಟನೆ ಬುರ್ಹಾನಪುರದ ಸೇವಾ ಸದನ್ ಕಾಲೇಜಿನಲ್ಲಿ ನಡೆದಿದೆ. ಈ ಕಾಲೇಜಿನ ವಿದ್ಯಾರ್ಥಿಯೊಬ್ಬ ಯುವತಿಗೆ ಚಾಕು ಇರಿದು ಹಲ್ಲೆ ಮಾಡಿದ್ದಾನೆ. ಸಿಕ್ಕಿ ಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಯುವಕ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಯುವಕ ಹಾಗೂ ಯುವತಿ ಕೆಲವು ದಿನಗಳ ಹಿಂದೆ ಬ್ರೇಕಪ್ ಮಾಡಿಕೊಂಡಿದ್ದರು. ಗುರುವಾರ ಕಾಲೇಜಿಗೆ ತಲುಪಿದಾಗ ಯುವಕ ತನ್ನ ಪ್ರೇಯಸಿಯ ಮನವೊಲಿಸಲು ಪ್ರಯತ್ನಿಸಿದ್ದಾನೆ. ಇದಕ್ಕಾಗಿ ಆತ ಯುವತಿಯನ್ನು ಮೂರನೇ ಮಹಡಿಗೆ ಕರೆದುಕೊಂಡು ಹೋಗಿದ್ದನು. ಈ ನಡುವೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಯುವಕ ಯುವತಿಗೆ ಚಾಕು ಇರಿದು ಹಲ್ಲೆ ಮಾಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಸಿಸಿಟಿವಿ ದೃಶ್ಯವಾಳಿಗಳನ್ನು ಪರಿಶೀಲಿಸುತ್ತಿದ್ದೇವೆ. ನಮ್ಮ ಒಂದು ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆರೋಪಿ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.