ಬಾಗಲಕೋಟೆ: ಮಕರ ಸಂಕ್ರಾಂತಿ (Makarasankranti) ಹಿನ್ನೆಲೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಬಾಲಕರು ಕೊಳದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮುಧೋಳ (Mudhol) ತಾಲೂಕಿನ ಜಾಲಿಕಟ್ಟಿ ಗ್ರಾಮದ ಕಲ್ಲಿನ ಕ್ವಾರಿಯಲ್ಲಿ ನಡೆದಿದೆ.
ಮನೋಜ್ (17) ಪ್ರಮೋದ್ ಬಡಿಗೇರ (17) ಮೃತ ಬಾಲಕರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಸಂಕ್ರಾಂತಿ ಹಿನ್ನೆಲೆ ಕ್ವಾರಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ತಂದೆ ಎದುರಲ್ಲೇ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇದನ್ನೂ ಓದಿ: ಪ್ರಭುಲಿಂಗ ದೇವರಿಗೆ 16 ಲಕ್ಷ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿದ್ದ ಅಜ್ಜಿಯ ಹತ್ಯೆ!
ಇಬ್ಬರು ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ನೀರಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಇಬ್ಬರು ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

