ನವದೆಹಲಿ: ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸುವಂತೆ ಜೋಧ್‍ಪುರ ಕೋರ್ಟ್ ಬುಧವಾರ ಸೂಚನೆ ನೀಡಿದ್ದ ಬೆನ್ನಲ್ಲೇ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.
ಅಂಬೇಡ್ಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವಿಟ್ಟರ್ ಖಾತೆ ನಕಲಿ ಎಂದು ತಿಳಿದುಬಂದಿದ್ದು, ಹಾರ್ದಿಕ್ ಪಾಂಡ್ಯ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿ ಟ್ವೀಟ್ ಮಾಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.
Advertisement
@sirhardik3777 ಎಂಬ ಖಾತೆಯಿಂದ ಅಂಬೇಡ್ಕರ್ ಅವರ ವಿರುದ್ಧದ ಟ್ವೀಟ್ ಮಾಡಲಾಗಿದೆ. ಆದರೆ ಹಾರ್ದಿಕ್ ಪಾಂಡ್ಯ ಅವರ ಅಧಿಕೃತ ಖಾತೆ @hardikpandya7 ಆಗಿದೆ. ಸದ್ಯ ನಕಲಿ ಖಾತೆಯನ್ನು ಸಾಮಾಜಿಕ ಜಾಲತಾಣದಿಂದ ಡಿಲಿಟ್ ಮಾಡಲಾಗಿದೆ.
Advertisement
Advertisement
ಏನಿದು ಪ್ರಕರಣ: ಕಳೆದ ಡಿಸೆಂಬರ್ ನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಜೋಧ್‍ಪುರ್ ಕೋರ್ಟ್ ರಾಜಸ್ಥಾನ ಪೊಲೀಸರಿಗೆ ಬುಧವಾರ ಸೂಚನೆ ನೀಡಿತ್ತು.
Advertisement
ಕ್ರಿಕೆಟಿಗ ಪಾಂಡ್ಯ ವಿರುದ್ಧ ವಕೀಲರು ಹಾಗೂ ರಾಷ್ಟ್ರೀಯ ಭೀಮ ಸೇನಾ ಸದಸ್ಯರಾಗಿರುವ ಡಿ.ಆರ್.ಮೇಘ್ವಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ದೂರು ಆಲಿಸಿದ ಬಳಿಕ ನ್ಯಾಯಾಲಯ ಪೊಲೀಸರಿಗೆ ಈ ಆದೇಶ ನೀಡಿತ್ತು.
ಎಸ್‍ಸಿ-ಎಸ್‍ಟಿ ಕಾಯ್ದೆಯಡಿ ಪಾಂಡ್ಯಾ ವಿರುದ್ಧ ಮೇಘ್ವಾಲ್ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಮೇಘ್ವಾಲ್ ಅವರು ಕ್ರಿಕೆಟಿಗನ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ರಾಜಸ್ಥಾನದ ಲುನಿ ಪೊಲೀಸ್ ಠಾಣೆಗೆ ಹೋದಾಗ, ಪೊಲೀಸ್ ಅಧಿಕಾರಿಗಳು ಕೇಸ್ ದಾಖಲಿಸಲು ನಿರಾಕರಿಸಿದ್ದರು. ಇದರ ನಂತರ ಅವರು ಜೋಧ್‍ಪುರ್ ನ್ಯಾಯಾಲಯದ ಮೊರೆ ಹೋಗಿದ್ದರು ಎಂದು ವರದಿಯಾಗಿತ್ತು.
ಪಾಂಡ್ಯ ಡಿಸೆಂಬರ್ ನಲ್ಲಿ ಪೋಸ್ಟ್ ಮಾಡಿದ್ದರು ಎಂದು ಆರೋಪಿಸಲಾಗಿದ್ದ ಟ್ವೀಟನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. `ಯಾವ ಅಂಬೇಡ್ಕರ್? ಅಡ್ಡ ಕಾನೂನು ಮತ್ತು ಸಂವಿಧಾನವನ್ನು ರಚಿಸಿದವರಾ? ಅಥವಾ ಈ ದೇಶದಲ್ಲಿ ಮೀಸಲಾತಿ ಎಂಬ ರೋಗವನ್ನು ಹರಡಿದವರಾ?’ ಎಂದು ಪಾಂಡ್ಯಾ ಟ್ವೀಟ್ ಮಾಡಿದ್ದರು ಎಂದು ಆರೋಪಿಸಲಾಗಿತ್ತು.