ಬಾಯ್ಕಾಟ್ ನಡುವೆಯೂ ಬಾಲಿವುಡ್ನಲ್ಲಿ `ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಕೋಟಿ ಕೋಟಿ ಲೂಟಿ ಮಾಡಿ ಗೆದ್ದು ಬಿಗುತ್ತಿದೆ. ರಣ್ಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ (Alia Bhatt) ಲವ್ ಕೆಮಿಸ್ಟ್ರಿ ಜೊತೆ ಚಿತ್ರದ ಕಂಟೆಂಟ್ ಫ್ಯಾನ್ಸ್ ಫಿದಾ ಆಗಿದ್ದಾರೆ. ಹೀಗಿರುವಾಗ ಚಿತ್ರದ ಬಗ್ಗೆ ಹೊಸ ಅಪ್ಡೇಟ್ವೊಂದು ಸಿಕ್ಕಿದೆ. ಈ ಚಿತ್ರದಲ್ಲಿ ರಣ್ಬೀರ್ ಕಪೂರ್ ತಾಯಿಯ ಪಾತ್ರದಲ್ಲಿ ರಣ್ಬೀರ್ ಮಾಜಿ ಗರ್ಲ್ಫ್ರೆಂಡ್ ದೀಪಿಕಾ ಪಡುಕೋಣೆ ನಟಿಸಿದ್ದಾರೆ.
Advertisement
ರಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ `ಬ್ರಹ್ಮಾಸ್ತ್ರ’ ಚಿತ್ರಕ್ಕೆ ಸಾಕಷ್ಟು ಅಡೆತಡೆ ಬಂದಿತ್ತು. ಇದೀಗ ರಿಲೀಸ್ ಆಗಿ ಎರಡೇ ದಿನಕ್ಕೆ 160 ಕೋಟಿ ಗಲ್ಲಾಪೆಟ್ಟಿಗೆಯಲ್ಲಿ ಲೂಟಿ ಮಾಡಿದೆ. ಈ ಗುಡ್ ನ್ಯೂಸ್ ನಡುವೆ ಶಾಕಿಂಗ್ ನ್ಯೂಸ್ವೊಂದು ಹೊರಬಿದ್ದಿದೆ. `ಬ್ರಹ್ಮಾಸ್ತ್ರ’ ಚಿತ್ರದಲ್ಲಿ ರಣ್ಬೀರ್ ತಾಯಿಯ ಪಾತ್ರದಲ್ಲಿ ನಟನ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಕಾಫಿನಾಡು ಚಂದು ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್ ಆಗಿದ್ದಕ್ಕೆ ಫ್ಯಾನ್ಸ್ ಬೇಸರ
Advertisement
Advertisement
ಈ ಚಿತ್ರದಲ್ಲಿ ಚಿಕ್ಕ ವಯಸ್ಸಿನಲ್ಲೇ ತಂದೆ ತಾಯಿಯನ್ನು ಕಳೆದುಕೊಂಡ ಶಿವ ಪಾತ್ರದಲ್ಲಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಇದೇ ಚಿತ್ರದಲ್ಲಿ ಸಣ್ಣ ದೃಶ್ಯವೊಂದರಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು. ಮಗು ಅವರ ಕೈಯಲ್ಲಿದೆ. ಇದರಿಂದ ಚಿತ್ರದಲ್ಲಿ ರಣಬೀರ್ಗೆ ತಾಯಿಯಾಗಿದ್ದಾಳೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.