ಚಾಮರಾಜನಗರ: ಕೆಎಸ್‍ಆರ್‍ಟಿಸಿ ಬಸ್ಸೊಂದರ ಬ್ರೇಕ್ ವಿಫಲವಾದ ಪರಿಣಾಮ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಮೈ ಜುಮ್ಮೆನ್ನಿಸುವ ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಯಲ್ಲಿ ಸೆರೆಯಾಗಿವೆ.
ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಬಸ್ ನಿಲ್ದಾಣದ ಬಳಿ ಸೋಮವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಕೆಎಸ್‍ಆರ್‍ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರರ ಮೇಲೆ ನುಗ್ಗಿದೆ. ಅಷ್ಟಕ್ಕೇ ನಿಲ್ಲದ ಬಸ್ ಕೆಲ ಜನರ ಮೇಲೆ ನುಗ್ಗಿ ಮತ್ತೊಂದೆರಡು ಬೈಕ್ ಗೆ ಡಿಕ್ಕಿ ಹೊಡೆದು ನಂತರ ಬಸ್ ನಿಂತಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
https://www.youtube.com/watch?v=EHbrPanoaZ4