ಬ್ರೆಸಿಲಿಯಾ: ಬಸ್ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, 37 ಮಂದಿ ಬಲಿ ಸಾವನ್ನಪ್ಪಿರುವ ಘಟನೆ ಬ್ರೆಜಿಲ್ (Brazil) ಮಿನಾಸ್ ಗೆರೈಸ್ (Minas Gerais) ರಾಜ್ಯದ ಫೆರ್ನಾವೊ ಡಯಾಸ್ ರಾಷ್ಟ್ರೀಯ ಹೆದ್ದಾರಿಯ (Fernao Dias National Highway) ಲಾಜಿನ್ಹಾ ಪಟ್ಟಣದ ಬಳಿ ನಡೆದಿದೆ.
ಶನಿವಾರ (ಡಿ.21) ಬೆಳಿಗ್ಗೆ ಈ ಘಟನೆ ನಡೆದಿದೆ. ಸಾವ್ ಪಾಲೊದಿಂದ 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಟಿಯೊಫಿಲೊ ಒಟೊನಿ ನಗರದ ಬಳಿ ಅಪಘಾತಕ್ಕೀಡಾಗಿದೆ. 37 ಜನರು ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಒಟೋನಿಯ ಟಿಯೋಫಿಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ತ್ರಾಸಿ ಬೀಚ್‌ನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ – ರೈಡರ್ ಕಣ್ಮರೆ
Advertisement
Advertisement
ಘಟನಾ ಸ್ಥಳಕ್ಕೆ ಮಿನಾಸ್ ಗೆರೈಸ್ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು, ಕ್ರೇನ್ ಮೂಲಕ ಅವಶೇಷಗಳನ್ನು ಹೊರತೆಗೆದಿದ್ದಾರೆ. ಜೊತೆಗೆ ಇದೇ ವೇಳೆ ಮೂವರು ಪ್ರಯಾಣಿಕರಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಬಸ್ ಟೈರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
Advertisement
ಅಪಘಾತದಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ದೇಹಗಳು ಛಿದ್ರಗೊಂಡ ಪರಿಣಾಮ ನಿಖರವಾಗಿ ಮೃತದೇಹಗಳ ಸಂಖ್ಯೆ ನಿರ್ದಿಷ್ಟಪಡಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: Maharashtra | ನೂತನ ಸಚಿವರಿಗೆ ಖಾತೆ ಹಂಚಿಕೆ, ಗೃಹಖಾತೆ ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಕಂಪ್ಲೀಟ್ ಲಿಸ್ಟ್!