ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ (MUDA Scam) ಸಂಚಲನ ಮೂಡಿಸಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಅಲ್ಲದೇ, ಈ ಪ್ರಕರಣವನ್ನು ಸಿಬಿಐಗೆ (CBI) ಒಪ್ಪಿಸಬೇಕು ಎಂದು ಬಿಜೆಪಿ, ಜೆಡಿಎಸ್ ನಾಯಕರು ಮುಗಿಬಿದ್ದಿದ್ದಾರೆ. ಈ ಹೊತ್ತಲ್ಲೇ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯವನ್ನು ತೆಗೆದುಕೊಂಡಿದೆ.
Advertisement
ರಾಜ್ಯದಲ್ಲಿ ಸಿಬಿಐಗೆ ಅಂಕುಶ ಹಾಕಿದೆ. ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆ (CBI Open Investigation) ನಡೆಸಲು ಇದ್ದ ಅನುಮತಿಯನ್ನು ಹಿಂಪಡೆದಿದೆ. ಕರ್ನಾಟಕದಲ್ಲಿ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ಮುಕ್ತ ಅವಕಾಶ ಇತ್ತು. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಯಾರಾದರೂ ದೂರು ನೀಡಿದರೇ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು.. ಆದ್ರೆ, ಇದಕ್ಕೀಗ ಸರ್ಕಾರ ಬ್ರೇಕ್ ಹಾಕಿದೆ. 2005ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನೇ ರದ್ದು ಮಾಡಿದೆ. ಹೀಗಾಗಿ ಸಿಬಿಐ ಇನ್ಮುಂದೆ ಕರ್ನಾಟಕದಲ್ಲಿ (Karnataka) ಯಾವುದೇ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರದ ಲಿಖಿತ ಅನುಮತಿ ಪಡೆಯುವುದು ಅತ್ಯಗತ್ಯವಾಗಿದೆ. ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್
Advertisement
Advertisement
ಸಿದ್ದರಾಮಯ್ಯ ಸರ್ಕಾರದ ನಡೆ ರಾಷ್ಟ್ರಮಟ್ಟದಲ್ಲಿ ಮತ್ತು ರಾಜಕೀಯವಾಗಿ ನಾನಾ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಅಂದ ಹಾಗೇ, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಶುಕ್ರವಾರ ಹೈಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Advertisement
ಸಿಬಿಐಗೆ ಅಂಕುಶ.. ಏಕೆ? – ಸರ್ಕಾರದ ಪ್ರಕಾರ..
* ಮೋದಿ ಸರ್ಕಾರಕ್ಕೆ ಸಿಬಿಐ ಅಸ್ತ್ರ ಆಗಬಾರದು
* ಈ ಸಂಸ್ಥೆ ದುರ್ಬಳಕೆ ಆಗುವ ಬಗ್ಗೆ ಆತಂಕವಿದೆ
* ಪ್ರತಿಯೊಂದು ಪ್ರಕರಣದಲ್ಲೂ ಮೂಗುತೂರಿಸುವ ಭಯ
* ಕೇಂದ್ರ ಸರ್ಕಾರದ್ದು ಪಕ್ಷಪಾತ ಧೋರಣೆ
* ನಾವು ಶಿಫಾರಸು ಮಾಡಿದ ಕೇಸ್‌ಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಿಲ್ಲ
* ಮುಡಾ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲ
* ಸಿಬಿಐ ತಪ್ಪು ಹಾದಿಗೆ ಹೊರಳುವುದನ್ನು ತಡೆಯಲು..
ಯಾವ್ಯಾವ ರಾಜ್ಯದಲ್ಲಿ ಸಿಬಿಐಗೆ ಅಂಕುಶ?
* ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ
* ಜಾರ್ಖಂಡ್, ರಾಜಸ್ಥಾನ, ಛತ್ತೀಸ್‌ಘಡ
* ತೆಲಂಗಾಣ, ಮಿಜೋರಾಂ, ಮೇಘಾಲಯ
* ಪಂಜಾಬ್ ಮತ್ತು ಈಗ ಕರ್ನಾಟಕ