ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು.. ಪ್ರಕೃತಿ ಮಡಿಲಲ್ಲಿ ಕುಡಿದು ಕುಣಿದು ಕುಪ್ಪಳಿಸಿ ಹೊಸ ವರ್ಷ 2025ನ್ನು (New Year 2025) ಸ್ವಾಗತಿಸೋಣ ಅಂತ, ಕೆಲ ಪಾರ್ಟಿ ಪ್ರಿಯರು ಅಂದುಕೊಂಡಿದ್ರೆ… ಈಗಲೇ ನಿಮ್ಮ ಪ್ಲ್ಯಾನ್ ಬದಲಾಯಿಸಿಕೊಳ್ಳಿ, ಯಾಕಂದ್ರೆ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿದೆ.
Advertisement
ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ (Nandi Hills) ಅಂದ್ರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1,478 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಾಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್. ಇನ್ನೂ ನಂದಿಗಿರಿಧಾಮದಲ್ಲಿ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025ನ್ನು ಸ್ವಾಗತೀಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ರು. ಆದ್ರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸಿಗೆ ತಣ್ಣೀರು ಎರಚಿದೆ. ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.
Advertisement
Advertisement
ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2025 ಜನವರಿ 1 ರಂದು ಬೆಳಿಗ್ಗೆ 6 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶವನ್ನೂ ಬಂದ್ ಮಾಡಲಾಗಿದೆ. ಇದ್ರಿಂದ ಪ್ರವಾಸೋದ್ಯಮ ಇಲಾಖೆಗೂ ನಿರ್ಬಂಧದ ಬಿಸಿ ಮುಟ್ಟಿದೆ. ಇದನ್ನೂ ಓದಿ: ಕಬ್ಬನ್ ಪಾರ್ಕ್ – ಯಾವುದೇ ಗುಂಪು ಚಟುವಟಿಕೆಗೆ ಅನುಮತಿ ಕಡ್ಡಾಯ
Advertisement
ಒಟ್ಟಾರೆ ಹೊಸ ವರ್ಷ ಆಚರಣೆಗೆ ಬೆಂಗಳೂರಿನ ಪಬ್ ರೆಸಾರ್ಟ್‌ಗಳ ಬದಲು ಪ್ರಕೃತಿಯ ಮಡಿಲಲ್ಲಿ ಹೊಸ ವರ್ಷಾಚರಣೆಯ ಕನಸ್ಸು ಕಂಡಿದ್ದ ಯುವ ಸಮುದಾಯಕ್ಕೆ ನಿರಾಸೆಯಾಗಿದೆ. ಇದನ್ನೂ ಓದಿ: ಅಮಿತ್ ಶಾ ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ: ಜೋಶಿ ವಿರುದ್ಧ ಹರಿಪ್ರಸಾದ್ ಕಿಡಿ