ಮುಂಬೈ: ವೆಸ್ಟ್ ಇಂಡೀಸ್ ಮಾಜಿ ನಾಯಕ, ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಅವರು ಈ ಯುಗದ ತಮ್ಮ ನೆಚ್ಚಿನ ಬ್ಯಾಟ್ಸ್‌ಮನ್ ಹೆಸರನ್ನು ರಿವೀಲ್ ಮಾಡಿದ್ದಾರೆ.
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್, ಟೀಂ ಇಂಡಿಯಾದ ವಿರಾಟ್ ಕೊಹ್ಲಿ, ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರ ಹೆಸರು ಹೇಳಬಹುದು ಎಂದು ನೀವು ನಿರೀಕ್ಷಿಸಿದರೆ ತಪ್ಪಾದಿತು. ಕನ್ನಡಿಗ ಕೆ.ಎಲ್.ರಾಹುಲ್ ಅವರ ಹೆಸರನ್ನು ಆಯ್ಕೆ ಮಾಡಿ ಲಾರಾ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ: ಕೆ.ಎಲ್.ರಾಹುಲ್ ‘360 ಡಿಗ್ರಿ’ ಬ್ಯಾಟ್ಸ್‌ಮನ್: ಮಂಜ್ರೇಕರ್
Advertisement
Advertisement
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2020 ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡವನ್ನು ಮುನ್ನಡೆಸುತ್ತಿರುವ ಲಾರಾ, ಪ್ರಸ್ತುತ ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತದ ‘ಮಿಸ್ಟರ್ 360’ ಕೆ.ಎಲ್.ರಾಹುಲ್ ಅವರ ಅತ್ಯಂತ ನೆಚ್ಚಿನ ಬ್ಯಾಟ್ಸ್‌ಮನ್ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಿಂಚಿನ ವೇಗದಲ್ಲಿ ರನೌಟ್ ಮಾಡಿದ ರಾಹುಲ್- ವಿಡಿಯೋ
Advertisement
ಕೆ.ಎಲ್.ರಾಹುಲ್ ಅವರ 360 ಡಿಗ್ರಿ ಬ್ಯಾಟಿಂಗ್ ಕೌಶಲ್ಯದಿಂದಾಗಿ ಲಾರಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ರಾಹುಲ್, ವಿಕೆಟ್ ಕೀಪರ್ ಆಗಿ ಉತ್ತಮ ಸಾಧನೆ ತೋರಿದ್ದರು. ಅಷ್ಟೇ ಅಲ್ಲದೆ ಅವರು ಓಪನರ್, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ಜೊತೆಗೆ ಕಿವೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ವಿರಾಟ್ ವಿಶ್ರಾಂತಿ ಪಡೆದಿದ್ದರು. ಆದರೆ ತಂಡದ ನಾಯಕತ್ವ ವಹಿಸಿಕೊಂಡಿದ್ದ ರೋಹಿತ್ ಶರ್ಮಾ ಗಾಯಗೊಂಡು ಪಂದ್ಯದಿಂದ ಹೊರಗುಳಿದಾಗ ಕೆ.ಎಲ್.ರಾಹುಲ್ ನಾಯಕತ್ವದ ಜವಾಬ್ದಾರಿ ನಿರ್ವಹಿಸಿ ತಂಡ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದರು.
Advertisement
ಈ ಯುಗದ ನಿಮ್ಮ ನೆಚ್ಚಿನ ಆಟಗಾರ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಬ್ರಿಯನ್ ಲಾರಾ, “ನಿಮಗೆ ತಿಳಿದಿರುವಂತೆ ನಾನು ವೆಸ್ಟ್ ಇಂಡೀಸ್ ತಂಡವನ್ನು ಹೊಗಳುತ್ತೇನೆ. ವಿಂಡೀಸ್ ತಂಡವು ಶ್ರೀಲಂಕಾದಲ್ಲಿ ಟಿ20 ಸರಣಿಯನ್ನು ಉತ್ತಮವಾಗಿ ಆಡುತ್ತಿದ್ದಾರೆ. ಪ್ರಪಂಚದಾದ್ಯಂತ ಅದ್ಭುತ ಬ್ಯಾಟ್ಸ್‌ಮನ್‍ಗಳಿದ್ದಾರೆ. ಸ್ಟೀವ್ ಸ್ಮಿತ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಬರುತ್ತಾರೆ. ಆದರೆ ನನ್ನ ನೆಚ್ಚಿನ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್” ಎಂದು ಅವರು ತಿಳಿಸಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಕೆ.ಎಲ್.ರಾಹುಲ್ ಆಯ್ಕೆ ಆಗಿದ್ದಾರೆ. ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ಮಾರ್ಚ್ 12ರಂದು ನಡೆಯಲಿದೆ. ಎರಡನೇ ಏಕದಿನ ಪಂದ್ಯವು ಲಕ್ನೋದಲ್ಲಿ ಮಾರ್ಚ್ 15ರಂದು ಹಾಗೂ ಮೂರನೇ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‍ನಲ್ಲಿ ಮಾರ್ಚ್ 18 ರಂದು ನಡೆಯಲಿದೆ.