ನವದೆಹಲಿ: ಲಂಚ ಪಡೆಯಲು ಮುಂದಾದಗಿದ್ದ ಮೂವರು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ದ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂದು ಎನ್‍ಐಎ ಸ್ಪಷ್ಟಪಡಿಸಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಹಫೀಜ್ ಸಯ್ಯದ್‍ನ ಉಗ್ರ ಸಂಘಟನೆ ಫಲಾಹ್-ಇ-ಇನ್ಸಾನಿಯತ್ ಫೌಂಡೇಶನ್(ಎಫ್‍ಐಎಫ್)ಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಮೂವರು ಅಧಿಕಾರಿಗಳು ತನಿಖೆ ನಡೆಸುತ್ತಿದ್ದರು. ದೆಹಲಿ ಮೂಲದ ಉದ್ಯಮಿಯೊಬ್ಬರು ಈ ಸಂಘಟನೆಗೆ ಧನ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣದಿಂದ ನಿಮ್ಮ ಹೆಸರನ್ನು ಕೈ ಬಿಡಬೇಕಾದ್ರೆ 2 ಕೋಟಿ ರೂ. ಹಣ ನೀಡಬೇಕೆಂದು ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಎನ್‍ಐಎಗೆ ದೂರು ಸಲ್ಲಿಸಿದ್ದರು.
National Investigation Agency Spokesperson on alleged bribery charges against 3 NIA officers in connection with a terror funding case: An inquiry into the allegations is being conducted by a DIG rank officer.The 3 concerned officials transferred out to ensure a fair probe. pic.twitter.com/ZVB2q0eD9X
— ANI (@ANI) August 20, 2019
ಅಧಿಕಾರಿಗಳ ವಿರುದ್ಧ ಲಂಚದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೇರೊಂದು ವಿಭಾಗಕ್ಕೆ ವರ್ಗಾವಣೆಗೊಳಿಸಲಾಗಿದೆ. ಓರ್ವ ಹಿರಿಯ ಅಧಿಕಾರಿಯನ್ನು ಎನ್‍ಐಎ ಮತ್ತೊಂದು ವಿಭಾಗಕ್ಕೆ ವರ್ಗಾಯಿಸಿದ್ದು, ಇಬ್ಬರು ಕಿರಿಯ ಅಧಿಕಾರಿಗಳು ಮಾತೃ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಎನ್‍ಐಎ ತಿಳಿಸಿದೆ.
26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ನಂತರ ಎನ್‍ಐಎ ಸ್ಥಾಪಿಸಲಾಗಿದೆ. ಭಯೋತ್ಪಾದನೆಯ ಪ್ರಕರಣಗಳನ್ನು ಇದು ಪ್ರತ್ಯೇಕವಾಗಿ ನಿರ್ವಹಿಸಲಿದೆ. ಇತ್ತೀಚೆಗೆ ಎನ್‍ಐಎಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗಿತ್ತು. ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಗೆ ತಿದ್ದುಪಡಿ ತಂದು ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಹೆಸರಿಸುವ ಸ್ವಾತಂತ್ರ್ಯವನ್ನು ಕಲ್ಪಿಸಲಾಗಿತ್ತು.