ಶ್ರೀನಗರ: ನಿರ್ಮಾಣ ಹಂತದ ಸೇತುವೆ ಕುಸಿದು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
ಸಾಂಬಾ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಕಬ್ಬಿಣದ ಕಟ್ಟು, ಹಲಗೆಗಳು ಕುಸಿದು ಬಿದ್ದಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್‌ನಲ್ಲಿ ವರ್ಕೌಟ್ ಮಾಡಿದ ಮೋದಿ
Advertisement
Advertisement
ರಾಮಗಡ-ಕೌಲ್‍ಪುರದಲ್ಲಿ ದೇವಿಕಾ ನದಿಯ ಮೇಲೆ ಗಡಿ ರಸ್ತೆಗಳ ಸಂಸ್ಥೆ ಪ್ರಮುಖ ಸೇತುವೆಯನ್ನು ಕಾಮಗಾರಿ ಆಗುತ್ತಿತ್ತು. ಕಾಂಕ್ರೀಟ್ ಸ್ಲ್ಯಾಬ್ ಹಾಕುವ ವೇಳೆ ಕಬ್ಬಿಣದ ಶೆಟರ್ ಕುಸಿದಿದೆ. ಈ ಅವಘಡ ಸಂಭವಿಸಿದಾಗ ಅಲ್ಲೇ ಇದ್ದ ಕಾರ್ಮಿಕರು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದರು. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇದನ್ನೂ ಓದಿ: ಗಡಿಯೊಳಗೆ ನುಸುಳಿದ ಪಾಕ್ ಯೋಧನ ಹತ್ಯೆ – ಶವವನ್ನ ಹಿಂದಕ್ಕೆ ತೆಗೆದುಕೊಳ್ಳಿ ಎಂದ ಭಾರತೀಯ ಸೇನೆ
Advertisement
Advertisement
ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಸ್ಥಳಾಂತರ ಮಾಡಲಾಗಿದೆ.