ಬೆಂಗಳೂರು/ಅಂಕೋಲಾ: ಕಳೆದೊಂದು ವಾರದಿಂದ ಅಬ್ಬರಿಸುತ್ತಿದ್ದ ವರುಣ ಈಗ ಕೊಂಚ ಶಾಂತವಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮಳೆಯಿಂದಾಗಿ ಅಂಕೋಲದ ಗಂಗಾವಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಾತ್ಕಾಲಿಕ ಸೇತುವೆ ಹಾಗೂ ಗುಳ್ಳಾಪುರ ಮತ್ತು ಡೊಂಗ್ರಿ ಗ್ರಾಮ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.
Advertisement
ಭಟ್ಕಳದ ಜಾಲಿಯಲ್ಲಿ ಮಣ್ಣು ಕುಸಿದು ಕಾರು ಹಳ್ಳಕ್ಕೆ ಬಿದ್ದಿದೆ. ದಾವಣಗೆರೆಯ ನ್ಯಾಮತಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಕಟಾವು ಮಾಡಿ ಬಣವೆ ಹಾಕಿದ್ದ ಭತ್ತ ಮಳೆ ನೀರಿಗೆ ನೆನದು ಮೊಳಕೆ ಬಂದಿವೆ. ಮೊಳಕೆಯೊಡೆದ ಭತ್ತ ಹಿಡಿದು ವೃದ್ಧೆ ಕಾಳಮ್ಮ ಕಣ್ಣೀರಿಟ್ಟಿದ್ದಾರೆ. ಸಾಲ-ಸೋಲ ಮಾಡಿ ಎಕರೆಗೆ ಸಾವಿರಾರು ರೂಪಾಯಿ ಬಂಡವಾಳ ಹೂಡಿದ್ದೇವೆ. ಈಗ ಫಸಲು ಕೈಗೆ ಬರುವುದರೊಳಗೆ ಮಳೆ ಬಂದು ಭತ್ತ ಮೊಳಕೆಯೊಡೆದಿದೆ ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಬ್ರಿಗೇಡ್ ರೋಡ್‍ನಲ್ಲಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು
Advertisement
Advertisement
ಹಳ್ಳದಲ್ಲಿ ಸಿಲುಕಿದ್ದ ವ್ಯಕ್ತಿ ರಕ್ಷಣೆ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಡದಳ್ಳಿ ಗ್ರಾಮದ ಬಳಿಯ ಬೆಣ್ಣಿ ಹಳ್ಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು 3 ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ತಾಲೂಕಿನಾದ್ಯಂತ ಕಳೆದ 3 ದಿನಗಳಿಂದ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿತ್ತು. ಈ ವೇಳೆ ಸ್ಥಳಕ್ಕೆ ಬಂದಿದ್ದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಯುವಕನ ಆರೋಗ್ಯ ವಿಚಾರಿಸಿದ್ರು. ಇತ್ತ ಬೆಂಗಳೂರಿನಲ್ಲಿ ಇಂದು ತಂಪು ವಾತಾವರಣ ಮುಂದುವರಿದಿದೆ.