ರಾಯಚೂರು: ಮಾನ್ವಿ ತಾಲೂಕಿನ ತಡಕಲ್ ಗ್ರಾಮದಲ್ಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದ ಸೇತುವೆ ಸುರಿದ ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿದೆ.
Advertisement
ಹಳ್ಳಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಕಾಮಗಾರಿಗೆ ಹಾಕಿದ್ದ ಮಣ್ಣು ಕೊಚ್ಚಿ ಹೋಗಿದೆ. ತಾತ್ಕಾಲಿಕ ಸೇತುವೆಯೂ ಸಹ ಕೊಚ್ಚಿಹೋಗಿದ್ದರಿಂದ ನಾಲ್ಕೈದು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ತಡಕಲ್, ತಡಕಲ್ ಕ್ಯಾಂಪ್, ಬ್ಯಾಗವಾಟ್, ಮಲ್ಲದಗುಡ್ಡ ಮತ್ತು ಡೋಣಮರಡಿ ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ರೈತರು ಜಮೀನಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ
Advertisement
Advertisement
ಪ್ರತೀ ಮಳೆಗಾಲದಲ್ಲೂ ಇದೆ ಸಮಸ್ಯೆ ಎದುರಿಸುತ್ತಿರೋ ತಡಕಲ್ ಗ್ರಾಮಸ್ಥರು ಶಾಸಕರು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸೇತುವೆ ನಿರ್ಮಾಣ ಮಾಡಿಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.