ತುಮಕೂರು: ಸೇತುವೆ (Bridge) ಬಳಿ ಈಜಲು(Swim) ಹೋಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ಮಧುಗಿರಿ (Madhugiri) ತಾಲೂಕಿನ ಪುರವರ ಬಳಿಯ ತಗ್ಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೇಮಂತ್ ಕುಮಾರ್ (21) ಮೃತ ಯುವಕ. ಈತ ಶನಿವಾರ ಮಧ್ಯಾಹ್ನದ ವೇಳೆ ಜಯಮಂಗಲಿ ನದಿ ನೀರು ಹರಿಯುವ ಸೇತುವೆ ಬಳಿ ಈಜಲೆಂದು ತೆರಳಿದ್ದ. ಈ ವೇಳೆ ನೀರಿನ ರಭಸ ಹೆಚ್ಚಾಗಿ ಸೇತುವೆ ಕೊಚ್ಚಿ ಹೋಗಿದೆ. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿ ಯುವಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ, ಬಿಜೆಪಿಯ ತಿರುಕನ ಕನಸು ನನಸಾಗಲ್ಲ: ಕೆವೈ ನಂಜೇಗೌಡ
ಕಳೆದ ಕೆಲ ತಿಂಗಳ ಹಿಂದಷ್ಟೇ ಚೆಕ್ ಡ್ಯಾಂ ನಿರ್ಮಿಸಲಾಗಿತ್ತು. ಚೆಕ್ ಡ್ಯಾಂ ಕಳಪೆ ಎಂದು ಗುತ್ತಿಗೆದಾರನ ವಿರುದ್ಧ ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಯುವಕನ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಸಂಜೆಯಿಂದ ಹುಡುಕಾಟ ನಡೆಸಿದರೂ ಯುವಕನ ಮೃತದೇಹ ಪತ್ತೆಯಾಗಿಲ್ಲ. ಇದನ್ನೂ ಓದಿ: ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ – ಯುವಕ ಸಾವು